ನವದೆಹಲಿ: 'ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವುದಿಲ್ಲ. ಅಂತಹ ಯಾವ ಪ್ರಸ್ತಾವನೆಯೂ ನಮ್ಮ ಎದುರಿಲ್ಲ' ಎಂದು ಕೇಂದ್ರ ಸರ್ಕಾರ ಸೋಮವಾರ ಸ್ಪಷ್ಟಪಡಿಸಿದೆ.
ಕೇಂದ್ರವು ಅಲ್ಪಸಂಖ್ಯಾತ ಸಚಿವಾಲಯವನ್ನು ರದ್ದುಗೊಳಿಸಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಜೊತೆ ವಿಲೀನಗೊಳಿಸಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.