ನವದೆಹಲಿ: ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ತಪಾಸಣೆಗೆ ಒಳಗಾಗಲು ಮಹಿಳೆಯರಿಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಅಭಯ್ ಎಸ್.ಓಕಾ ಅವರಿದ್ದ ನ್ಯಾಯಪೀಠವು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಇತರರಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿತು.
ಗರ್ಭಧರಿಸುವ ಕುರಿತು ಮಹಿಳೆಯರ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿರುವ ಕ್ರಮವನ್ನು ಪ್ರಶ್ನಿಸಿ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದರು.
'ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ತಪಾಸಣೆ (ಲಿಂಗ ಪತ್ತೆ ನಿಯಂತ್ರಣ) ಕಾಯ್ದೆ 1994ರ ಸೆಕ್ಷನ್ 4(3) (ಐ) ಅನ್ನು ಪ್ರಶ್ನಿಸಿ ಮತ್ತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಕೆಯಾಗಿದೆ. ಇದಕ್ಕೆ ಸೀಮಿತವಾಗಿ ನೋಟಿಸ್ ಜಾರಿ ಮಾಡುವುದಾಗಿ' ಎಂದು ನ್ಯಾಯಪೀಠ ತಿಳಿಸಿತು.