HEALTH TIPS

ತೈಲ ಟ್ಯಾಂಕರ್ ಸ್ಫೋಟ: ನಾಲ್ಕು ಮಂದಿ ಸಾವು

 

          ಐಜಾಲ್: ಮಿಜೋರಾಂನ ಐಜಾಲ್‌ನಲ್ಲಿ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಅಪಘಾತಕ್ಕೀಡಾಗಿ ಸ್ಫೋಟಗೊಂಡ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

         ಟ್ಯಾಂಕರ್ ಸ್ಫೋಟ ಪ್ರಕರಣದಲ್ಲಿ 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

                22,000 ಲೀಟರ್ ಪೆಟ್ರೋಲ್ ಅನ್ನು ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತಕ್ಕೀಡಾಗಿದೆ. ನಂತರ ಬೆಂಕಿ ಹೊತ್ತಿಕೊಂಡಿದ್ದರಿಂದ ಅವಘಡ ಸಂಭವಿಸಿತು ಎಂದು ಪೊಲೀಸರು ಹೇಳಿದ್ದಾರೆ.

             ಅಪಘಾತಕ್ಕೀಡಾಗಿದ್ದ ಟ್ಯಾಂಕರ್‌ನಿಂದ ಪೆಟ್ರೋಲ್ ಸೋರಿಕೆಯಾಗಿತ್ತು. ಆ ಸಂದರ್ಭದಲ್ಲಿ ಸ್ಥಳೀಯರು ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದರು. ಆಗ ಬೆಂಕಿ ಹೊತ್ತಿಕೊಂಡಿದ್ದರಿಂದ ಸ್ಥಳದಲ್ಲಿದ್ದ ನಾಲ್ವರು ಸುಟ್ಟು ಹೋದರೆ, ಮತ್ತೆ 18 ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries