HEALTH TIPS

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ, ಪೈಲಟ್ ಸಾವು

 

         ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದೆ.

                        ಘಟನೆಯಲ್ಲಿ ಒಬ್ಬ ಪೈಲಟ್ ಮೃತಪಟ್ಟಿದ್ದಾರೆ ಎಂದು ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


                    ತವಾಂಗ್ ಬಳಿಯ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪತನಗೊಂಡಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

                ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪೈಲಟ್‌ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

An Indian Army Cheetah helicopter crashed today near Tawang area in Arunachal Pradesh. One pilot has lost his life in the accident: Army Officials
Image

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries