ನವದಹೆಲಿ: ರಾಜ್ಯದಲ್ಲಿ ಹಕ್ಕಿ ಜ್ವರ ಹರಡುತ್ತಿರುವುದನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಕೇರಳಕ್ಕೆ ಉನ್ನತ ಮಟ್ಟದ ತಂಡವನ್ನು ನಿಯೋಜಿಸಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಂಗಳೂರಿನಲ್ಲಿರುವ ಪ್ರಾದೇಶಿಕ ಕಚೇರಿಯ ಹಿರಿಯ ಪ್ರಾದೇಶಿಕ ನಿರ್ದೇಶಕ ಡಾ.
ರಾಜೇಶ್ ಕೆದಮನಿ ನೇತೃತ್ವದ ಏಳು ಸದಸ್ಯರ ತಂಡವು ವಿವರವಾಗಿ ತನಿಖೆ ನಡೆಸಿ, ಶಿಫಾರಸುಗಳೊಂದಿಗೆ ವರದಿಯನ್ನು ಸಲ್ಲಿಸುತ್ತದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ರಾಜ್ಯದಿಂದ ವರದಿಯಾಗುತ್ತಿರುವ ಪ್ರಕರಣಗಳನ್ನು ನಿರ್ವಹಿಸಲು ಸಾರ್ವಜನಿಕ ಆರೋಗ್ಯ ಕ್ರಮಗಳು, ನಿರ್ವಹಣಾ ಮಾರ್ಗಸೂಚಿಗಳು ಮತ್ತು ಶಿಷ್ಟಾಚಾರ ವಿಷಯದಲ್ಲಿ ತಂಡವು ರಾಜ್ಯ ಆರೋಗ್ಯ ಇಲಾಖೆಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಿಕೆ ತಿಳಿಸಿದೆ.
ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ದೃಢಪಟ್ಟಿದ್ದು, ಗುರುವಾರ ಹರಿಪಾಡ್ ಪುರಸಭೆಯ ವಝುತಾನಂ ವಾರ್ಡ್‌ನಲ್ಲಿ 20,000 ಕ್ಕೂ ಹೆಚ್ಚು ಪಕ್ಷಿಗಳನ್ನು ಹತ್ಯೆ ಮಾಡಲು ಅಧಿಕಾರಿಗಳು ಪ್ರಾರಂಭಿಸಿದರು.
ಪಕ್ಷಿಗಳ ಮಾದರಿಗಳನ್ನು ಭೋಪಾಲ್‌ನಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈಸೆಕ್ಯುರಿಟಿ ಅನಿಮಲ್ ಡಿಸೀಸ್‌ಗೆ ಪರೀಕ್ಷೆಗೆ ಕಳುಹಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ.