HEALTH TIPS

ತುಳು ಭಾಷೆಯಲ್ಲೂ ಶೀಘ್ರದಲ್ಲೇ ಬರಲಿದೆ 'ಕಾಂತಾರ'

 

          ಸೆಪ್ಟೆಂಬರ್ 30 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ಜಗತ್ತಿನಾದ್ಯಂತ ರೂ.100 ಕೋಟಿ ಗಳಿಸಿದ್ದು, ಈಗಲೂ ಎಲ್ಲಾ ಚಿತ್ರಮಂದಿರಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. 

             ಚಿತ್ರಕ್ಕೆ ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳಿಂದಲೂ ಉತ್ತಮ ಪ್ರತಿಕ್ರಿಯೆ ಹಾಗೂ ಪ್ರಶಂಸೆಗಳು ವ್ಯಕ್ತವಾಗುತ್ತಿವೆ. ಪರಭಾಷೆಯ ಸಿನಿಮಾ ಸೆಲೆಬ್ರೆಟಿಗಳು ಸಿನಿಮಾವನ್ನು ಕೊಂಡಾಡುತ್ತಿದ್ದಾರೆ.

                ತಮಿಳು ಹಾಗೂ ಹಿಂದಿಯಲ್ಲಿ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಮಲಯಾಳಂ ಆವೃತ್ತಿಯ ಸಿನಿಮಾ ಈ ವಾರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 

                  ಚಿತ್ರಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ನಡುವಲ್ಲೇ ತುಳುನಾಡಿನವರು ತುಳು ಭಾಷೆಯಲ್ಲಿ ಸಿನಿಮಾ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಅವರ ಬೇಡಿಕೆಯಂತೆಯೇ ತುಳು ಭಾಷೆಯಲ್ಲೂ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಆದರೆ, ಯಾವ ದಿನಾಂಕದಂದು ತುಳುಭಾಷೆಯ ಆವೃತ್ತಿಯ ಚಿತ್ರ ಬಿಡುಗಡೆಯಾಗಲಿದೆ ಎಂಬುದು ಇನ್ನೂ ಬಹಿರಂಗಗೊಂಡಿಲ್ಲ.

             ರಿಷಬ್ ಶೆಟ್ಟಿಯವರು ಕಾಂತಾರ ಚಿತ್ರದಲ್ಲಿ ಕರಾವಳಿಯ ಭಾಷೆ, ಸಂಸ್ಕೃತಿ, ಆಚಾರ-ವಿಚಾರವನ್ನು ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ, ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಬಗ್ಗೆ ರಿಷಬ್ ಶೆಟ್ಟಿ ಕಾಂತಾರ ಮೂಲಕ ಜನರ ಮುಂದಿಟ್ಟಿದ್ದಾರೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದ ದೈವಾರಾಧನೆ, ಭೂತಕೋಲದ ಆಚರಣೆ ಕಾಂತಾರದ ಹೈಲೆಟ್ ಆಗಿದೆ. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದರು. 

               ಕಾಂತಾರ ಚಿತ್ರಕ್ಕೆ ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣ ಮತ್ತು ಅಜನೀಶ್ ಲೋಕನಾಥ್ ಅವರ ಸಂಗೀತವಿದೆ. ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಪ್ರಸಾದ್ ತೂಮಿನಾಡ್, ಸ್ವರಾಜ್ ಶೆಟ್ಟಿ ಮತ್ತು ಮಾನಸಿ ಸುಧೀರ್ ಅವರ ಸಮಗ್ರ ತಾರಾಗಣ ಚಿತ್ರದಲ್ಲಿದೆ.


Tags

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries