ನವದೆಹಲಿ: ಎಐಸಿಸಿಯ ನೂತಕ ಅಧ್ಯಕ್ಷರಾಗಿ ಚುನಾಯಿತರಾದ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ನನ್ನ ಶುಭಾಶಯಗಳು.ಮುಂದಿನ ದಿನಗಳಲ್ಲಿ ಅವರ ಅಧಿಕಾರಾವಧಿ ಫಲಪ್ರದವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಮೊದಲ ಬಾರಿಗೆ ಗಾಂಧಿಯೇತರ ಕುಟುಂಬದ ಪಾಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ಚುನಾವಣೆ ನಡೆದಿತ್ತು. ಮಲ್ಲಿಕಾರ್ಜುನ ಖರ್ಗೆ 7897 ಮತ ಪಡೆದರೆ. ಖರ್ಗೆ 1000 ಮತಗಳನ್ನು ಪಡೆದುಕೊಂಡಿದ್ದರು.
ತಮ್ಮ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.