ಕಾಸರಗೋಡು: ಭಯೋತ್ಪಾದಕ ಸಂಘಟನೆಗಳೊಂದಿಗೆ ಎಡ ಹಾಗೂ ಐಕ್ಯರಂಗ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದು, ಇದನ್ನು ಸಾರ್ವಜನಿಕರಿಗೆ ಮನದಟ್ಟುಮಾಡಿಕೊಡುವ ನಿಟ್ಟಿನಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಕುಂಬಳೆ ಮತ್ತು ಹೊಸದುರ್ಗದಲ್ಲಿ ದೇಶರಕ್ಷಾ ಕಾರ್ಯಕ್ರಮ ಹಮ್ಮಿಕೊಳಖ್ಳಲಾಗುವುದು ಎಂದು ಬಿಜೆಪಿ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಶ್ರೀಕಾಂತ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಅ. 21ರಂದು ಕುಂಬಳೆ ಪೇಟೆಯಲ್ಲಿ ದೇಶರಕ್ಷಾ ಸಂಗಮ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಮಂಜೇಶ್ವರ, ಕುಂಬಳೆ, ಕಾಸರಗೋಡು, ಬದಿಯಡ್ಕ ಹಾಗೂ ಮುಳಿಯಾರು ಮಂಡಲ ಸಮಿತಿ ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳು ಪಾಲ್ಗೊಳ್ಳುವರು. 23ರಂದು ಮಧ್ಯಾಹ್ನ 3ಕ್ಕೆ ಹೊಸದುರ್ಗ ಕೋಟಚ್ಚೇರಿಯಲ್ಲಿ ನಡೆಯುವ ದೇಶರಕ್ಷಾ ಸಂಗಮವನ್ನು ಬಿಜೆಪಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಟಿ ರಮೇಶ್ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ತೃಕ್ಕರಿಪುರ, ಹೊಸದುರ್ಗ, ವೆಳ್ಳರಿಕುಂಡು, ಉದುಮ ಮಂಡಲಗಳಿಂದ ಕಾರ್ಯಕರ್ತರು ಪಾಲ್ಗೊಳ್ಳುವರು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಎ.ವೇಲಾಯುಧನ್ ಉಪಸ್ಥಿತರಿದ್ದರು.
ಜಿಲ್ಲೆಯ ಎರಡು ಕೇಂದ್ರಗಳಲ್ಲಿ ಬಿಜೆಪಿಯಿಂದ ನಾಳೆ ದೇಶರಕ್ಷಾ ಸಂಗಮ
0
ಅಕ್ಟೋಬರ್ 19, 2022