ಕಾಸರಗೋಡು: ಗಾಂಧಿ ಜಯಂತಿ ಸಪ್ತಾಹದ ಅಂಗವಾಗಿ ಜಿಲ್ಲಾ ವಾರ್ತಾ ಕಚೇರಿ ವತಿಯಿಂದ ಪೂರ್ವ ಪ್ರಾಥಮಿಕ ಹಾಗೂ 1ನೇ ತರಗತಿ ವಿದ್ಯಾರ್ಥಿಗಳಿಗಾಗಿ ನಡೆದ ಛದ್ಮವೇಷ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಬಹುಮಾನ ವಿತರಿಸಿದರು. ಫಿಯಾನ್ ರಾಡ್ರಿಗ್ಸ್ ಆಫ್ ಹೋಲಿ ಫ್ಯಾಮಿಲಿ ಕಾನ್ವೆಂಟ್ ಪಬ್ಲಿಕ್ ಸ್ಕೂಲ್ ಬದಿಯಡ್ಕ, ನೀಲೇಶ್ವರ ಸೇಂಟ್ ಪೀಟರ್ಸ್‍ಶಾಲೆಯ ಮೃತಿಕಾ ಮಧು ಮತ್ತು ಜಿಯುಪಿಎಸ್ ಕಾನತ್ತೂರಿನ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದುಕೊಂಡರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಪ್ರಮಾಣ ಪತ್ರ ವಿತರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಎಂ.ಮಧುಸೂದನನ್ ಹಾಗೂ ಮಾಹಿತಿ ಕಛೇರಿ ಸಿಬ್ಬಂದಿ ಭಾಗವಹಿಸಿದ್ದರು.
ಗಾಂಧಿ ಜಯಂತಿ ಸಪ್ತಾಹ: ಛದ್ಮವೇಷಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
0
ಅಕ್ಟೋಬರ್ 17, 2022
Tags