ಬದಿಯಡ್ಕ: ಕ್ರೀಡೆಯು ಮಕ್ಕಳ ಮಾನಸಿಕ, ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಮಕ್ಕಳು ಸದಾ ಚಟುವಟಿಕೆಯಿಂದಿರಬೇಕಾದರೆ ಬಿಸಿಲು ಮಳೆ ಗಾಳಿ ಚಳಿಗೆ ಮೈಯೊಡ್ಡಿ ಎಲ್ಲವನ್ನೂ ಎದುರಿಸಲು ಇರುವ ಆತ್ಮಸ್ಥೈರ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಅಭಿಪ್ರಾಯಪಟ್ಟರು.
ಬದಿಯಡ್ಕ ಭಾರತೀ ನಗರದಲ್ಲಿ ಜರಗಿದ ಶಾಲಾ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು.
ಮಕ್ಕಳು ಸದಾ ಚಟುವಟಿಕೆಯಿಂದ ಇದ್ದರೆ ಮಾತ್ರ ಉತ್ತಮ ಆರೋಗ್ಯವನ್ನು, ಗಟ್ಟಿಮುಟ್ಟಾದ ಶರೀರವನ್ನು ಹೊಂದಲು ಸಾಧ್ಯವಿದೆ. ಪಾಠದೊಂದಿಗೆ ಕ್ರೀಡೆಯಲ್ಲಿ ಮಕ್ಕಳು ಪಾಲ್ಗೊಳ್ಳುವಂತೆ ಹೆತ್ತವರು ಅವರಿಗೆ ಸದಾ ಮಾರ್ಗದರ್ಶನ, ಪ್ರೋತ್ಸಾಹವನ್ನು ನೀಡಬೇಕು ಎಂದರು.
ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಬೇಂಡ್ ವಾದ್ಯಗಳನ್ನು ವಿದ್ಯಾರ್ಥಿಗಳು ನುಡಿಸಿದರು. ವಿದ್ಯಾರ್ಥಿಗಳ ವಿವಿಧ ತಂಡಗಳ ಮುಖಂಡರು ಕ್ರೀಡಾಜ್ಯೋತಿಯನ್ನು ಬೆಳಗಿದರು. ಒಂದರಿಂದ ಹತ್ತನೇ ತರಗತಿಯ ತನಕದ ವಿದ್ಯಾರ್ಥಿಗಳು 2 ದಿನಗಳಲ್ಲಾಗಿ ನಡೆದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.
ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಕ್ರೀಡಾಕೂಟ
0
ಅಕ್ಟೋಬರ್ 09, 2022