ಲಖನೌ: ಅಪ್ರಾಪ್ತ ವಯಸ್ಕಳು ಮದುವೆಯಾದ ನಂತರ ದೈಹಿಕ ಸಂಬಂಧಕ್ಕೆ ಅನುಮತಿಸಿದ್ದರೂ, ಅದಕ್ಕೆ ಯಾವುದೇ ಮಹತ್ವ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಾಧನಾ ರಾಣಿ (ಠಾಕೂರ್) ಅವರಿದ್ದ ಏಕಸದಸ್ಯ ನ್ಯಾಯಪೀಠ, ಈ ಪ್ರಕರಣದಲ್ಲಿ ಪತಿಗೆ ಯಾವುದೇ ರೀತಿಯ ಪರಿಹಾರ ನೀಡಲು ಸಾಧ್ಯ ಇಲ್ಲ ಎಂದು ಹೇಳಿತು.