ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಪಕ್ಷದ ಸಂಸದೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.
ಇಲ್ಲಿನ ಸಫ್ದರ್‌ಜಂಗ್ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಸ್ಮಾರಕಕ್ಕೆ ತೆರಳಿದ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶ್ರದ್ಧಾಂಜಲಿ ಅರ್ಪಿಸಿದರು.