ರಾಯಪುರ: ಛತ್ತೀಸಗಡದಲ್ಲಿ 10 ಮತ್ತು 12ನೇ ತರಗತಿಯ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಕನಿಷ್ಠ 125 ವಿದ್ಯಾರ್ಥಿಗಳನ್ನು ಶನಿವಾರ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸುವ ಮೂಲಕ ಅಭಿನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
10 ಮತ್ತು 12ನೇ ತರಗತಿಯ ಮುಖ್ಯ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಏಳು ಆಸನದ ಹೆಲಿಕಾಪ್ಟರ್‌ನಲ್ಲಿ ಜಾಲಿ ರೈಡ್‌ಗೆ ಕರೆದುಕೊಂಡು ಹೋಗಲಾಗಿತ್ತು ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.
10 ಮತ್ತು 12ನೇ ತರಗತಿ ಪರೀಕ್ಷೆಯಲ್ಲಿ ಅತ್ಯಧಿಕ ಅಂತ ಪಡೆದ 10 ವಿದ್ಯಾರ್ಥಿಗಳನ್ನು ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಲು ಅವಕಾಶ ಕಲ್ಪಿಸುವುದಾಗಿ ಕಳೆದ ಮೇ ತಿಂಗಳಿನಲ್ಲಿ ಮುಖ್ಯಮಂತ್ರಿ ಘೋಷಿಸಿದ್ದರು.