HEALTH TIPS

ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಬಿಜೆಪಿ ತಯಾರಿ ನಡೆಸಬೇಕು: ತರೂರ್

 

               ಮುಂಬೈ: ಪ್ರತಿಪಕ್ಷದ ಸ್ಥಾನದಲ್ಲಿ ಕೂರಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತಯಾರಿ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ, ಸಂಸದ ಶಶಿ ತರೂರ್ ಭಾನುವಾರ ಹೇಳಿದ್ದಾರೆ.ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.

               2024ರ ಲೋಕಸಭಾ ಚುನಾವಣೆಯ ಬಳಿಕ ಬಿಜೆಪಿ ವಿಪಕ್ಷದ ಸ್ಥಾನದಲ್ಲಿ ಕೂರುವುದು ಖಚಿತ ಎಂದು ಅವರು ಹೇಳಿದರು.


            ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಅಗತ್ಯವಿದೆ. ನಾನೇ ಬದಲಾವಣೆಯ ಪರಿವರ್ತಕ ಎಂದು ಸಹ ಹೇಳಿದರು.

                    ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ. ಒಂದೆಡೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೆ ಇನ್ನೊಂದೆಡೆ ದ್ವೇಷ ಹರಡಲಾಗುತ್ತದೆ ಎಂದು ಆರೋಪಿಸಿದರು.

                    ಕಾಂಗ್ರೆಸ್ ಅನುಭವಿ ನಾಯಕರನ್ನು ಹೊಂದಿದ್ದು, ದೇಶವನ್ನು ಮುನ್ನಡೆಸಲು ಸಮರ್ಥರಾಗಿದ್ದಾರೆ. ಮಗದೊಮ್ಮೆ ಜನರ ವಿಶ್ವಾಸವನ್ನು ಗೆಲ್ಲಬೇಕಿದೆ ಎಂದು ಹೇಳಿದರು.

Mumbai | BJP should start preparing of being a part of the opposition as they will have to sit there after the 2024 elections: Congress Presidential candidate, Shashi Tharoor
Image

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries