ಕಾಸರಗೋಡು: ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಕಾಸರಗೋಡನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸುವ ಗುರಿಯನ್ನು ಸಾಧಿಸಲು ಎಲ್ಲಾ ಕಾರ್ಯಕ್ರಮಗಳು, ಆಚರಣೆಗಳು, ಕಲೆ-ಕ್ರೀಡೆ-ವಿಜ್ಞಾನ ಮೇಳಗಳು ಇತ್ಯಾದಿ.ಹಬ್ಬ ಹರಿದಿನಗಳಲ್ಲೂ ಹಸಿರು ನೀತಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಚರಣೆಗಳ ಅಂಗವಾಗಿ ಬರುವ ವಾಣಿಜ್ಯ ಸಂಸ್ಥೆಗಳು ಮತ್ತು ರೆಸ್ಟೋರೆಂಟ್‍ಗಳಿಗೆ ಮಾತ್ರವಲ್ಲ ಸರ್ಕಾರದ ಸಾರ್ವಜನಿಕ ಕಾರ್ಯಕ್ರಮಗಳಿಗೂ ಹಸಿರು ನಿಯಮ ಅನ್ವಯಿಸಲಿದೆ.
ಜನವರಿ 1, 2020 ರಿಂದ 50 ಮೈಕ್ರಾನ್‍ಗಿಂತ ಕಡಿಮೆಯಿರುವ ಏಕ ಬಳಕೆಯ ಪ್ಲಾಸ್ಟಿಕ್‍ನ ಬಳಕೆ ಮತ್ತು ವಿತರಣೆಯನ್ನು ನಿಷೇಧಿಸಲಾಗಿದೆ. ಇಂತಹ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಬಳಕೆ ಮತ್ತು ವಿತರಣೆಯನ್ನು ಸ್ಥಳೀಯ ಸಂಸ್ಥೆಗಳು ಕಟ್ಟುನಿಟ್ಟಾಗಿ ತಡೆಯಬೇಕು. ಜಿಲ್ಲೆಯ ಶಾಲಾ-ಕಾಲೇಜುಗಳು, ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಈ ನಿರ್ಧಾರವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಂಸ್ಥೆಗಳ ಮುಖ್ಯಸ್ಥರು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ಲಾಸ್ಟಿಕ್ ನಿಷೇಧ: ಕಟ್ಟುನಿಟ್ಟಿನ ಜಾರಿಗೆ ಆದೇಶ
0
ಅಕ್ಟೋಬರ್ 24, 2022
Tags