ನವದೆಹಲಿ:
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ (ಇಡಬ್ಲ್ಯುಎಸ್) ಶಿಕ್ಷಣ ಮತ್ತು ಉದ್ಯೋಗದಲ್ಲಿ
ಕಲ್ಪಿಸಲಾಗಿರುವ ಶೇ.10 ಮೀಸಲಾತಿಯ ಸಿಂಧುತ್ವವನ್ನು ಪ್ರಶ್ನಿಸಿದ ಅರ್ಜಿ ಕುರಿತು ಇಂದು
ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶೇ.10
ಮೀಸಲಾತಿಯನ್ನು ಎತ್ತಿಹಿಡಿಯುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.