HEALTH TIPS

ಯಕ್ಷಗಾನ ತಾಳಮದ್ದಳೆ ಸಪ್ತಾಹ - 2022 ಆಮಂತ್ರಣ ಬಿಡುಗಡೆ: ಯಕ್ಷಾಂಗಣದಿಂದ ಕಲೆ - ಕಲಾವಿದರಿಗೆ ಗೌರವ: ಡಾ.ಎಂ.ಪ್ರಭಾಕರ ಜೋಶಿ

 

               ಮಂಗಳೂರು: 'ಕಳೆದ ಹತ್ತು ವರ್ಷಗಳಿಂದ ಮಂಗಳೂರು ನಗರದಲ್ಲಿ ತಾಳಮದ್ದಳೆ ಸಪ್ತಾಹವನ್ನು ನಡೆಸಿ ಯಕ್ಷಗಾನದ ವಾಚಿಕ ವಿಭಾಗಕ್ಕೆ ವಿಸ್ತಾರವಾದ ಹರಹು ನೀಡಿದ ಯಕ್ಷಾಂಗಣದಿಂದ ಕಲೆ ಮತ್ತು ಕಲಾವಿದರಿಗೆ ಸೂಕ್ತ ಗೌರವ ಲಭಿಸಿದೆ. ರಾಜ್ಯೋತ್ಸವ ಕಲಾ ಸಂಭ್ರಮ ಪರಿಕಲ್ಪನೆಯಲ್ಲಿ ನಡೆಯುವ ಸರಣಿ ತಾಳಮದ್ದಳೆ ಕಾರ್ಯಕ್ರಮ ದಶಮಾನ ಪೂರೈಸಿ ಮುನ್ನಡೆಯಲಿ' ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಅರ್ಥಧಾರಿ, ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಹಾರೈಸಿದ್ದಾರೆ.
        ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆಯು ತನ್ನ ದಶಮಾನೋತ್ಸವ ಸಲುವಾಗಿ ನವೆಂಬರ 21ರಿಂದ 27ರವರೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿರುವ 'ಯಕ್ಷಗಾನ ತಾಳಮದ್ದಳೆ ಸಪ್ತಾಹ - 2022' ಹತ್ತನೇ ವರ್ಷದ ನುಡಿ ಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. 'ಯಕ್ಷಾಂಗಣವು ಪ್ರತಿ ವರ್ಷ ತಾಳಮದ್ದಳೆಯೊಂದಿಗೆ ಕಲಾವಿದರ ಸನ್ಮಾನ, ಪ್ರಶಸ್ತಿ ಪ್ರದಾನ ಮತ್ತು ಗತಿಸಿದ ಮಹನೀಯರ ಸಂಸ್ಮರಣೆ ಮಾಡುತ್ತಿರುವುದು ಒಂದು ಸ್ತುತ್ಯ ಕಾರ್ಯ' ಎಂದವರು ನುಡಿದರು.
       ಹಿರಿಯಉದ್ಯಮಿ, ಕಲಾಪೋಷಕ ಎ.ಕೆ.ಜಯರಾಮ ಶೇಖ, ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ, ನಿಕಟಪೂರ್ವ ಸದಸ್ಯ ಕದ್ರಿ ನವನೀತ ಶೆಟ್ಟಿ, ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್.ದಾಸಪ್ಪ ರೈ, ಕಣಿಪುರ ಯಕ್ಷಗಾನ ಮಾಸ ಪತ್ರಿಕೆ ಸಂಪಾದಕ ಎಂ.ನಾ.ಚಂಬಲ್ತಿಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
           ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮದ ರೂಪ ರೇಷೆಯನ್ನು ವಿವರಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಸ್ವಾಗತಿಸಿ, ಸಮಿತಿ ನಿರ್ದೇಶಕ ಕೆ.ರವಿಂದ್ರ ರೈ ಕಲ್ಲಿಮಾರು ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries