ಬಾಲಿ: ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಲ್ಲಿರುವ ಭಾರತೀಯ ಸಮುದಾಯದೊಂದಿಗೆ ಮಂಗಳವಾರ ಸಂವಾದ ನಡೆಸಿದರು.
ಸಂವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದ ಸಭಾಗೃಹಕ್ಕೆ ಮೋದಿ ಅವರು ಪ್ರವೇಶಿಸುತ್ತಿದ್ದಂತೆಯೇ, ಭಾರತೀಯರಿಂದ ಭಾರಿ ಕರತಾಡನ, ಹರ್ಷೋದ್ಗಾರ ಕಂಡುಬಂತು.