ಕೊಲಂಬೊ: ಶ್ರೀಲಂಕಾದ ಜಲ ಗಡಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆಯು 24 ಭಾರತೀಯ ಮೀನುಗಾರರನ್ನು ಬಂಧಿಸಿ, ಅವರ ಐದು ದೋಣಿಗಳನ್ನು ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
'ಉತ್ತರ ಜಾಫ್ನಾ ಪರ್ಯಾಯ ದ್ವೀಪದ ಕಾರೈನಗರ್ ಕರಾವಳಿಯಲ್ಲಿ ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆ ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ. ನಂತರ ಅವರನ್ನು ಕಂಕೆಸಂತುರೈ ಬಂದರಿಗೆ ಕರೆತಂದು ಮೀನುಗಾರಿಕಾ ವಿಭಾಗದ ಕಚೇರಿಗೆ ಹಸ್ತಾಂತರಿಸಲಾಯಿತು' ಎಂದು ನೌಕಾಪಡೆ ತಿಳಿಸಿದೆ.
ಶ್ರೀಲಂಕಾದ ಜಲ ಗಡಿಯೊಳಗೆ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಈವರೆಗೆ ಒಟ್ಟು 252 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಅದು ತಿಳಿಸಿದೆ.