HEALTH TIPS

ನರೇಗಾಕ್ಕಾಗಿ ₹25,000 ಕೋಟಿ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ

 

           ನವದೆಹಲಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗಾಗಿ (ನರೇಗಾ) ₹25,000 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಕೇಂದ್ರ ಹಣಕಾಸು ಸಚಿವಾಲಯಕ್ಕೆ ಬೇಡಿಕೆ ಸಲ್ಲಿಸಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

                ಈ ತಿಂಗಳ ಎರಡನೇ ವಾರದಲ್ಲಿ ಹಣ ಹಂಚಿಕೆಯಾಗುವ ನಿರೀಕ್ಷೆ ಇದೆ. 2022-23ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ₹73,000 ಕೋಟಿ ಅನುದಾನವನ್ನು ನರೇಗಾಕ್ಕೆ ನೀಡಲಾಗಿತ್ತು. ಇದರಲ್ಲಿ ₹54,000 ಕೋಟಿಯನ್ನು ಈಗಾಗಲೇ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಈ ಬಾರಿಯ ನರೇಗಾಗ ಒಟ್ಟು ವೆಚ್ಚವು ₹98,000 ಕೋಟಿ ತಗುಲುವ ನಿರೀಕ್ಷೆ ಇದೆ. ಸರ್ಕಾರವು ಸಂಸತ್ತಿನ ಅನುಮೋದನೆ ಪಡೆದು ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಿದೆ ಎಂದು ಮೂಲಗಳು ಹೇಳಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries