ನವದೆಹಲಿ:ಸಂಸತ್ತಿನ ಚಳಿಗಾಲದ ಅಧಿವೇಶನವು ಡಿ.7ರಿಂದ 29ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.
23 ದಿನಗಳ ಕಾಲ ನಡೆಯಲಿರುವ ಅಧಿವೇಶನವು 17 ಬೈಠಕ್ಗಳನ್ನು ಒಳಗೊಂಡಿರಲಿದೆ ಎಂದು ಹೇಳಿದ ಜೋಶಿ,ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರಗಳು ಮತ್ತು ಇತರ ವಿಷಯಗಳ ಕುರಿತು ಚರ್ಚೆಗಳಿಗಾಗಿ ಎದುರು ನೋಡುತ್ತಿದ್ದೇವೆ. ರಚನಾತ್ಮಕ ಚರ್ಚೆಗಳನ್ನು ನಿರೀಕ್ಷಿಸಿದ್ದೇವೆ ಎಂದರು.