ತಿರುವನಂತಪುರ: ಎಲ್.ಡಿ.ಎಫ್. ಆಯೋಜಿಸಿದ್ದ ರಾಜಭವನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಏಳು ಮಂದಿ ಸರ್ಕಾರಿ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ. ಮುಖ್ಯ ಕಾರ್ಯದರ್ಶಿಯವರು ನೋಟಿಸ್ ಕಳುಹಿಸಿದ್ದಾರೆ. ಒಂದು ವಾರದೊಳಗೆ ವಿವರಣೆ ನೀಡಲು ಸೂಚಿಸಲಾಗಿದೆ.
ರಾಜ್ಯಪಾಲರ ವಿರುದ್ಧ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಭಾಗವಹಿಸಿದ ನೌಕರರ ವಿರುದ್ಧ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಮುಖ್ಯ ಕಾರ್ಯದರ್ಶಿಗೆ ಕೇಳಿದ್ದರು. ನೌಕರರು ಕೆಲಸಕ್ಕೆ ತೆರಳಿ ಹಾಜರಾತಿ ದಾಖಲಿಸಿ ಬಳಿಕ ಮುಷ್ಕರ ನಡೆಸಿದ್ದಾರಾ ಎಂಬುದನ್ನು ಸ್ಪಷ್ಟಪಡಿಸುವಂತೆ ಮುಖ್ಯ ಕಾರ್ಯದರ್ಶಿಗೆ ಪತ್ರದಲ್ಲಿ ಕೋರಲಾಗಿದೆ. ಇದಾದ ಬಳಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ.
ಕಳೆದ 15ರಂದು ಎಲ್ ಡಿಎಫ್ ರಾಜಭವನ ಮೆರವಣಿಗೆ ಆಯೋಜಿಸಿತ್ತು. ಈ ಜಾಥಾದಲ್ಲಿ ಒಂದು ಲಕ್ಷ ಜನ ಭಾಗವಹಿಸಬೇಕು ಎಂದು ಘೋಷಿಸಲಾಗಿತ್ತು. ನಂತರ ಪ್ರಮುಖ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ಏಳು ಮಂದಿ ರಾಜಭವನ ಮಾರ್ಚ್ ನಲ್ಲಿ ಭಾಗವಹಿಸಿದ್ದರು. ವಿಡಿಯೋ, ಫೆÇೀಟೋ ಸಹಿತ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿತ್ತು.
ರಾಜಭವನ ಮೆರವಣಿಗೆಯಲ್ಲಿ ಭಾಗವಹಿಸಿದ್ದ 7 ಸರ್ಕಾರಿ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
0
ನವೆಂಬರ್ 25, 2022
Tags