ಪಣಜಿ: ಇತ್ತೀಚೆಗಷ್ಟೇ ಬಿಜೆಪಿಗೆ ಸೇರಿದ ಕಾಂಗ್ರೆಸ್‌ನ 8 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸುವುದಾಗಿ ಗೋವಾ ಕಾಂಗ್ರೆಸ್ ಘಟಕ ಮಂಗಳವಾರ ಹೇಳಿದೆ.
ಅನರ್ಹತೆ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳನ್ನು ಸ್ಪೀಕರ್ ಅವರ ಕಚೇರಿಯಿಂದ ಪಕ್ಷವು
ಪಡೆದುಕೊಂಡಿದೆ ಎಂದು ಗೋವಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಪಾಟ್ಕರ್
ತಿಳಿಸಿದ್ದಾರೆ.
ಮಾಜಿ
ಅಡ್ವೊಕೇಟ್ ಜನರಲ್ ಮತ್ತು ಕಾಂಗ್ರೆಸ್ ಶಾಸಕ ಕಾರ್ಲೋಸ್ ಅಲ್ವಾರೆಸ್ ಫೆರೇರಾ ಅವರು
ಅರ್ಜಿಯ ಕರಡನ್ನು ರಚಿಸಲಿದ್ದು, ಅದನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದೂ ಪಾಟ್ಕರ್
ಹೇಳಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ನ 11 ಶಾಸಕರ ಪೈಕಿ 8 ಶಾಸಕರು ಬಿಜೆಪಿಗೆ ಸೇರಿದ ಬಳಿಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಮೂರಕ್ಕೆ ಕುಸಿದಿದೆ.