ತಿರುವನಂತಪುರ: ರಾಜ್ಯದಲ್ಲಿ ಡೆಂಗ್ಯೂ ಮಾತ್ರವಲ್ಲದೆ ವೈರಲ್ ಜ್ವರವೂ ಹರಡುತ್ತಿದೆ. ನಿನ್ನೆಯμÉ್ಟೀ 9,790 ಮಂದಿ ವೈರಲ್ ಜ್ವರದಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಸರ್ಕಾರದ ಅಂಕಿಅಂಶ ತಿಳಿಸಿದೆ.
ಜ್ವರದಿಂದ ಬಳಲುತ್ತಿರುವವರು ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕಳೆದ ಎರಡು ವಾರಗಳಲ್ಲಿ ಜ್ವರ ಪೀಡಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಪ್ರತಿ ಜಿಲ್ಲೆಯಲ್ಲಿ ಜ್ವರ ಪೀಡಿತರ ಸಂಖ್ಯೆ ದ್ವಿಗುಣಗೊಂಡಿದೆ. ಕಳೆದ ನಾಲ್ಕು ದಿನಗಳಲ್ಲಿ ವೈರಲ್ ಜ್ವರಕ್ಕೆ ಚಿಕಿತ್ಸೆ ಪಡೆದವರ ಸಂಖ್ಯೆ 30,000 ಕ್ಕೂ ಹೆಚ್ಚಿದೆ. ಈ ವರ್ಷ ಇದುವರೆಗೆ 27,43,948 ಜನರು ವೈರಲ್ ಜ್ವರಕ್ಕೆ ತುತ್ತಾಗಿದ್ದಾರೆ. ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಿದೆ.
ವೈರಲ್ ಜ್ವರ ಪೀಡಿತ ರೋಗಿಗಳ ಸಂಖ್ಯೆ ಅಪಾಯಕಾರಿಯಾಗಿ ಏರಿಕೆಯಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಜ್ವರದಿಂದ ಬಳಲುತ್ತಿರುವವರು ಕೊರೋನಾ ಪರೀಕ್ಷೆಗೆ ಒಳಗಾಗಬೇಕು ಎಂದು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು, ಆರೋಗ್ಯ ನಿರೀಕ್ಷಕರ ಸಹಕಾರದೊಂದಿಗೆ ಸ್ಥಳೀಯ ಮಟ್ಟದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಬಲಪಡಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಪರಿಣಾಮಕಾರಿಯಾಗಿಲ್ಲ ಎಂಬ ಆರೋಪವಿದೆ.
ಡೆಂಗ್ಯೂ ಜ್ವರದ ಜೊತೆಗೆ ವೈರಲ್ ಜ್ವರ: ನಿನ್ನೆ ಒಂದೇದಿನ ವರದಿಯಾಗಿರುವುದು ಸುಮಾರು ಹತ್ತು ಸಾವಿರ ಜನರು
0
ನವೆಂಬರ್ 05, 2022