ಕುಂಬಳೆ : ಜನಸಂಘದ ಹಿರಿಯ ಕಾರ್ಯಕರ್ತ, ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ಮಾಜಿ ಉಪಾಧ್ಯಕ್ಷ, ಹಿರಿಯ ಸ್ವಯಂ ಸೇವಕ ಗಂಗಾಧರ ಕಡಪ್ಪುರ ಇವರಿಗೆ ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ವತಿಯಿಂದ ಪಕ್ಷದ ಕಚೇರಿಯಲ್ಲಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆಯನ್ನು ಕುಂಬಳೆ ಬಿಜೆಪಿ ಸಮಿತಿಯ ಅಧ್ಯಕ್ಷ ಸುಜಿತ್ ರೈ ವಹಿಸಿದ್ದರು. ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಮುರಳೀಧರ ಯಾದವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಜೆಪಿ ಮಂಡಲ ಉಪಾಧ್ಯಕ್ಷ ಕೆ ರಮೇಶ್ ಭಟ್, ಮಂಡಲ ಕಾರ್ಯದರ್ಶಿ ಕೆ. ಸುಧಾಕರ ಕಾಮತ್, ಬ್ಲಾಕ್ ಪಂಚಾಯತಿ ಸದಸ್ಯೆ ಪ್ರೇಮ ಶೆಟ್ಟಿ, ಹಿರಿಯರಾದ ಶಶಿ ಕುಂಬಳೆ, ಗೋಪಾಲ ಪೂಜಾರಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಸದಸ್ಯ ವಿವೇಕಾನಂದ ಶೆಟ್ಟಿ ಸ್ವಾಗತಿಸಿ, ಪ್ರೇಮಾವತಿ ವಂದಿಸಿದರು.
ಕುಂಬಳೆಯಲ್ಲಿ ಶ್ರದ್ದಾಂಜಲಿ ಸಭೆ
0
ನವೆಂಬರ್ 14, 2022