HEALTH TIPS

ಕೇಂದ್ರ ಸರ್ಕಾರಿ ನೌಕರನಿಂದ ದೇಶದ್ರೋಹಿ ಕೆಲಸ; ಪಾಕಿಸ್ತಾನಿಯಿಂದ ಹನಿಟ್ರ್ಯಾಪ್​ಗೆ ಒಳಗಾದವನ ಬಂಧನ

 

             ನವದೆಹಲಿ: ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಕಳಿಸಿಕೊಡುವ ಮೂಲಕ ದೇಶದ್ರೋಹಿ ಕೆಲಸದಲ್ಲಿ ತೊಡಗಿದ್ದ ಕೇಂದ್ರ ಸರ್ಕಾರಿ ನೌಕರನೊಬ್ಬನನ್ನು ರಾಜಧಾನಿಯ ಪೊಲೀಸರು ಬಂಧಿಸಿದ್ದಾರೆ. ವಿದೇಶಾಂಗ ಸಚಿವಾಲಯದ ಕಾರು ಚಾಲಕ ಬಂಧಿತ ಆರೋಪಿ.

          ವಿದೇಶಾಂಗ ಸಚಿವಾಲಯದಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಶ್ರೀಕೃಷ್ಣನ್ ಎಂಬಾತ ಹನಿಟ್ರ್ಯಾಪ್​ಗೆ ಒಳಗಾಗಿ ಪಾಕಿಸ್ತಾನಕ್ಕೆ ದೇಶದ ರಹಸ್ಯ ಮಾಹಿತಿಯನ್ನು ಕಳಿಸಿಕೊಡುತ್ತಿದ್ದ ಆರೋಪದ ಮೇಲೆ ಆತನನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

                ಪಾಕಿಸ್ತಾನದ ಇಂಟೆಲೆಜೆನ್ಸ್ ಏಜೆನ್ಸಿಯಿಂದ ಹನಿಟ್ರ್ಯಾಪ್​ಗೆ ಒಳಗಾದ ಶ್ರೀಕೃಷ್ಣನ್, ದೇಶದ ಭದ್ರತೆಗೆ ಸಂಬಂಧಿಸಿದ ಗುಪ್ತ ಮಾಹಿತಿಯನ್ನು ಐಎಸ್​​ಐಗೆ ರವಾನಿಸುತ್ತಿದ್ದ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹುಡುಗಿಯರ ಫೋಟೋ ಹಾಗೂ ವಿಡಿಯೋಗಳನ್ನೂ ಆತನಿಂದ ವಶಪಡಿಸಿಕೊಳ್ಳಲಾಗಿದೆ ಎಂದೂ ಹೇಳಲಾಗುತ್ತಿದೆ.

             ಪೊಲೀಸ್ ಹಾಗೂ ಇಂಟೆಲಿಜೆನ್ಸ್ ಏಜೆನ್ಸಿಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ನಡೆಸುತ್ತಿದ್ದು, ವಿದೇಶಾಂಗ ಸಚಿವಾಲಯದ ಇತರರೂ ಇದರಲ್ಲಿ ಪಾಲ್ಗೊಂಡಿದ್ದರೇ ಎಂಬ ಮಾಹಿತಿಯನ್ನೂ ಕಲೆ ಹಾಕುತ್ತಿದ್ದಾರೆ. ಅದಾಗ್ಯೂ ಸಚಿವಾಲಯದಿಂದ ಈ ಕುರಿತಂತೆ ಅಧಿಕೃತ ಮಾಹಿತಿ ಇನ್ನೂ ಪ್ರಕಟವಾಗಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries