ಉಡುಪಿ : ಭಾರತದ ತಂಟೆಗೆ ಬಂದ್ರೆ ನಾವು ಮುಖಮೂತಿ ನೋಡಲ್ಲ ಎಂದು ಶತ್ರು ರಾಷ್ಟ್ರಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ ಭೇಟಿ ನೀಡಿದ್ದಾರೆ.ಮಣಿಪಾಲದ ಮಾಹೆ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿದ್ದಾರೆ .
ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ, ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ಮುಖಮೂತಿ ನೋಡದೆ ಉತ್ತರ ಕೊಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಡುಪಿಗೆ ಭೇಟಿ ನೀಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು,. ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.