ಕಾಸರಗೋಡು: ಜಿಲ್ಲಾ ವಾರ್ತಾ ಮತ್ತು ಮಾಹಿತಿ ಇಲಾಖೆ ಮತ್ತು ಜಿಲ್ಲಾ ಪ್ರವಾಸೋದ್ಯಮ ಪ್ರಚಾರ ಮಂಡಳಿ ಜಂಟಿಯಾಗಿ ವಿಶ್ವ ಪರಂಪರೆಯ ಸಪ್ತಾಹದ ಅಂಗವಾಗಿ 'ಕೋಟೆಯಿಂದ ಕೋಟೆಗೆ'ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
ನವೆಂಬರ್ 23 ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ ರಣವೀರ್‍ಚಂದ್ ಫ್ಲ್ಯಾಗ್‍ಆಫ್ ನಡೆಸುವರು. ಸಹಾಯಕ ಜಿಲ್ಲಾಧಿಕಾರಿ ಮಿಥುನ್ ಪ್ರೇಮರಾಜ್ ಅಧ್ಯಕ್ಷತೆ ವಹಿಸುವರು.
ಕಾರ್ಯಕ್ರಮದನ್ವಯ ಜಿಲ್ಲೆಯ ಪ್ರವಾಸ ಮತ್ತು ಪ್ರವಾಸೋದ್ಯಮ ವಿದ್ಯಾರ್ಥಿಗಳಿಗೆ ಕೋಟೆಗಳು ಮತ್ತು ಐತಿಹಾಸಿಕ ಸ್ಮಾರಕಗಳನ್ನು ಪರಿಚಯಿಸಿಕೊಡಲಾಗುವುದು. ಜಿಲ್ಲೆಯಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಪರಿಚಯಿಸುವ ಗುರಿಯೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಇಂಟಾಕ್ ಸಂಸ್ಥೆ ಕೂಡ ಸಹಕಾರ ನೀಡಲಿದೆ.