ತಿರುವನಂತಪುರ: ರಾಜ್ಯದ ರಸ್ತೆಗಳು ಮತ್ತು ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವ ವಾಣಿಜ್ಯ ಚಟುವಟಿಕೆಗಳನ್ನು ತಪ್ಪಿಸುವಂತೆ ಮಕ್ಕಳ ಹಕ್ಕುಗಳ ಆಯೋಗವು ಆದೇಶ ಹೊರಡಿಸಿದೆ.
ಆಯೋಗದ ಅಧ್ಯಕ್ಷ ಕೆ.ವಿ.ಮನೋಜ್ ಕುಮಾರ್ ಹಾಗೂ ಸದಸ್ಯೆ ಶ್ಯಾಮಲಾದೇವಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಪಾಲಕರು ತಮ್ಮ ಮಕ್ಕಳೊಂದಿಗೆ ಬಿಸಿಲಿನಲ್ಲಿ ವ್ಯಾಪಾರ ಮಾಡಬಾರದು, ಮಕ್ಕಳು ನೇರವಾಗಿ ವ್ಯಾಪಾರ ಮಾಡಬಾರದು. ಮಕ್ಕಳ ಸುರಕ್ಷತೆ ಮತ್ತು ಹಿತವನ್ನು ಕಾಪಾಡುವಂತೆ ರಾಜ್ಯ ಪೋಲೀಸ್ ಮುಖ್ಯಸ್ಥರು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಿಗೆ ಸೂಚಿಸಲಾಗಿದೆ.
ಕ್ರಮ ಕೈಗೊಂಡಿರುವ ವರದಿಯನ್ನು 45 ದಿನಗಳಲ್ಲಿ ನೀಡುವಂತೆಯೂ ಆಯೋಗ ಸೂಚಿಸಿದೆ. ಹೋರಾಟದಲ್ಲಿ ಮಕ್ಕಳನ್ನು ಗುರಾಣಿಯಾಗಿ ಬಳಸಿಕೊಳ್ಳಬಾರದು ಹಾಗೂ ಈ ರೀತಿ ವರ್ತಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಯೋಗದ ಹಿಂದಿನ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಯೋಗ ಸೂಚಿಸಿದೆ.
ರಸ್ತೆಗಳು ಮತ್ತು ಟ್ರಾಫಿಕ್ ಸಿಗ್ನಲ್‍ಗಳಲ್ಲಿ ಮಕ್ಕಳನ್ನು ಬಳಸಿ ವಾಣಿಜ್ಯ ಚಟುವಟಿಕೆ ಕೂಡದು: ರಾಜ್ಯ ಮಕ್ಕಳ ಹಕ್ಕು ಆಯೋಗ
0
ನವೆಂಬರ್ 07, 2022