ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದ ನಿರ್ವಹಣಾ ಸಮಿತಿ ಸಭೆ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯÀಲ್ಲಿ ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಆಮಂತ್ರಣ ಪತ್ರಿಕೆಯ ಕರಡು ಪ್ರತಿಯನ್ನು ರೂಪಿಸಲಾಯಿತು. ಕಲೋತ್ಸವದ ತಯಾರಿಯ ಬಗ್ಗೆ ಎಲ್ಲಾ ಪದಾಧಿಕಾರಿಗಳು ತಮ್ಮ ಕೆಲಸ ಕಾರ್ಯಗಳನ್ನು ವಿವರಿಸಿದರು. ಮೀಂಜ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೆಲು, ಎಲ್ಲಾ ವಾರ್ಡ್‍ಗಳ ಸದಸ್ಯರು, ಆರೋಗ್ಯ ಪರಿವೀಕ್ಷಕಿ ಶ್ರೀಜಾ, ಉಪಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ, ಶಾಲಾ ಸಂಚಾಲಕ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಶ್ರೀಧರ ರಾವ್ ಆರ್.ಎಮ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿವಶಂಕರ ಭಟ್ ಸ್ವಾಗತಿಸಿ, ಅರವಿಂದಾಕ್ಷ ಭಂಡಾರಿ ವಂದಿಸಿದರು. ಬಾಲಕೃಷ್ಣ ಎಮ್ ಕಾರ್ಯಕ್ರಮ ನಿರೂಪಿಸಿದರು.
ಮಂಜೇಶ್ವರ ಉಪಜಿಲ್ಲಾ ಕಲೋತ್ಸವ: ನಿರ್ವಹಣಾ ಸಮಿತಿ ಸಭೆ
0
ನವೆಂಬರ್ 10, 2022