HEALTH TIPS

ಕಾನೂನಿನ ಅಡಿಯಲ್ಲಿ ಎಲ್ಲ ನಾಗರಿಕರೂ ಸಮಾನರು: ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಸಿ.ಕೃಷ್ಣಕುಮಾರ್

 


           ಕಾಸರಗೋಡು: ಮೂಲಭೂತ ಹಕ್ಕುಗಳಂತೆ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನದ ಜವಾಬ್ದಾರಿ ಇದ್ದು, ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯವಾಗುತ್ತವೆ ಎಂದು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ ಸಿ.ಕೃಷ್ಣಕುಮಾರ್ ತಿಳಿಸಿದ್ದಾರೆ.
         ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ(ಡಿಎಲ್‍ಎಸ್‍ಎ)ದ ಕಾನೂನು ಅರಿವು ಕಾರ್ಯಕ್ರಮ 'ಹಕ್-ಹಮಾರಾ-ಭಿ-ತೋ ಹೈ@ 75'- ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
            ಸಮಾನತೆಯ ಹಕ್ಕು ಸಂವಿಧಾನ ನೀಡಿರುವ ಬಹುಮುಖ್ಯ ಹಕ್ಕುಗಳಲ್ಲಿ ಒಂದಾಗಿದೆ. ಒಬ್ಬ ವ್ಯಕ್ತಿಯ ಶ್ರೇಣಿ ಅಥವಾ ಶಿಕ್ಷಣವು ಅಲ್ಲಿ ಮುಖ್ಯವಾಗಿರದೆ,  ಸಂವಿಧಾನದಡಿಯಲ್ಲಿ ಎಲ್ಲರೂ ಸಮಾನರಾಗಿದ್ದು,  ಅಭಿವ್ಯಕ್ತಿ ಸ್ವಾತಂತ್ರ್ಯವೂ ಅಷ್ಟೇ ಮುಖ್ಯವಾಗಿರುತ್ತದೆ.  ದುರಾದೃಷ್ಟವಶಾತ್ ಇಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ದುರ್ಬಳಕೆಯಾಗುತ್ತಿದೆ. ಈ ಕಾಲಘಟ್ಟದಲ್ಲಿ  ಇಂತಹ ತರಗತಿಗಳು ಹೆಚ್ಚು ಪ್ರಸಕ್ತಿ ಪಡೆಯುತ್ತದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ ಚಂದ್ ವಹಿಸಿದ್ದರು. ವಿಶ್ರಾಂತ ಪ್ರಾಧ್ಯಾಪಕ ಡಾ.ಪಿ.ಅನಂತಕೃಷ್ಣ ಭಟ್ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಕುರಿತು ತರಗತಿ ನಡೆಸಿದರು.  
          ಕಾಸರಗೋಡು ವಕೀಲರ ಸಂಘದ ಅಧ್ಯಕ್ಷ ಎಂ.ನಾರಾಯಣ ಭಟ್, ಸಂಘದ ಸದಸ್ಯ ವಕೀಲ ಕರುಣಾಕರನ್ ನಂಬಿಯಾರ್ ಉಪಸ್ಥಿತರಿದ್ದರು.  ಕಾಸರಗೋಡು ಉಪ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಬಿ.ಕರುಣಾಕರನ್ ಸ್ವಾಗತಿಸಿದರು.  ಡಿಎಲ್‍ಎಸ್‍ಎ ಸೆಕ್ಷನ್ ಆಫೀಸರ್ ಕೆ.ದಿನೇಶ ವಂದಿಸಿದರು.
           ಸ್ವಾತಂತ್ರ್ಯೋತ್ಸವದ 75ನೇ ವರ್ಷ'ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ 'ಹಕ್-ಹಮಾರಾ-ಭಿ-ತೋ ಹೈ @ 75' ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ನ. 13ರವರೆಗೆ ಅಭಿಯಾನ ನಡೆಯಲಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries