ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲಾ ಪಾರ್ಲಿಮೆಂಟ್ ಚುನಾವಣೆ ಪ್ರಜಾಪ್ರಭುತ್ವ ರೀತಿಯಲ್ಲಿ ನಡೆಯಿತು. ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗಿನ ಚುನಾವಣಾ ಪ್ರಕ್ರಿಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆಯಿತು.
ಮತ ಎಣಿಕೆ ಬಳಿಕ ವಿಜಯಿಗಳ ಹೆಸರನ್ನು ಪ್ರಕಟಿಸಲಾಯಿತು. ಚುನಾಯಿತ ಪ್ರತಿನಿಧಿಗಳು ಪಾರ್ಲಿಮೆಂಟ್ ಸಭೆ ಸೇರಿ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು. ಹತ್ತನೇ ತರಗತಿಯ ಯಶ್ವಿತ್ ಕುಮಾರ್ ಶಾಲಾ ನಾಯಕನಾಗಿ ಆಯ್ಕೆಯಾದರು. ಅಂಜಲಿ ಪಿ, ಮೊಹಮ್ಮದ್ ಸೈಫುದ್ದಿನ್, ರಕ್ಷಿತ, ರಕ್ಷಾ, ಮೊಹಮ್ಮದ್ ಫಮೀನ್, ಜೀವನ್ ಇತರ ಪದಾಧಿಕಾರಿಗಳಾಗಿ ಆಯ್ಕೆಯಾದರು. ಶಾಲಾ ಮುಖ್ಯೋಪಾಧ್ಯಾಯಿನಿ ಉμÁ ಅವರು ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ನೆರವೇರಿಸಿದರು.
ಸೂರಂಬೈಲು ಶಾಲಾ ಪಾರ್ಲಿಮೆಂಟ್ ಚುನಾವಣೆ
0
ನವೆಂಬರ್ 06, 2022
Tags