ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ಸೇರಿದಂತೆ ಒಟ್ಟು 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಸ್ವೀಕಾರ ಅರ್ಹತೆ ಕುರಿತ ತೀರ್ಪನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠವು ಕಾಯ್ದಿರಿಸಿದೆ.
ಸಿಬಿಐ ಪರ ವಕೀಲ ಹಾಗೂ ಅರ್ಜಿದಾರರ ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ತೀರ್ಪು ಕಾಯ್ದಿರಿಸಿರುವುದಾಗಿ ಸೋಮವಾರ ಹೇಳಿದೆ.
'ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಪರಿಷ್ಕರಣೆ ಮೊಕದ್ದಮೆ ದಾಖಲಿಸಿರುವ ಅಯೋಧ್ಯೆ ನಿವಾಸಿಗಳಾದ ಹಾಜಿ ಮೆಹಬೂಬ್ ಮತ್ತು ಹಾಜಿ ಅಖಲಕ್ ಅವರು ವಿಶೇಷ ನ್ಯಾಯಾಲಯದ ತೀರ್ಪನ್ನು ಸಿಬಿಐ ಪ್ರಶ್ನಿಸಿಲ್ಲ. ಹೀಗಾಗಿ ನಾವು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದೇವೆ' ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ಪ್ರಕರಣದ ಸಂಬಂಧ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಲು ಅರ್ಜಿದಾರರಿಗೆ ಯಾವುದೇ ಹಕ್ಕಿಲ್ಲ ಎಂದು ಸಿಬಿಐ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದರು.