ಮಂಗಳೂರು: ಮಂಗಳೂರು ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ತೀರ್ಥಹಳ್ಳಿಯ ಶಾರೀಕ್ ಎಂಬುದನ್ನು ಎಡಿಜಿಪಿ ಅಲೋಕ್ ಕುಮಾರ್ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಿಂದ ಪೊಲೀಸರು ಕರೆಸಿಕೊಂಡಿದ್ದ ಮಲತಾಯಿ ಶಬಾನಾ, ಸೋದರಿ ಆತಿಯಾ, ತಾಯಿಯ ತಂಗಿ ಯಾಸ್ಮಿನ್ ಅವರು ಈತನೇ ಶಾರಿಕ್ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ, ಪೊಲೀಸರ ದಾಳಿ ವೇಳೆ ಶಾರೀಕ್ ಉಳಿದುಕೊಂಡಿದ್ದ ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ಹೇಳಿದ್ದಾರೆ.
ನವೆಂಬರ್ 19ರಂದು ಸಂಜೆ 4.40ರಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪ್ರಯಾಣಿಕ, ಆಟೋ ಚಾಲಕನಿಗೆ ಗಾಯಗಳಾಗಿವೆ. ಕೂಡಲೇ ಪೊಲೀಸ್ ಅಧಿಕಾರಿಗಳಿಂದ ಗುರುತು ಪತ್ತೆ ಮಾಡುವ ಕೆಲಸ ಆರಂಭವಾಗಿದ್ದು, ಆರೋಪಿ ಬಳಿ ಪ್ರೇಮರಾಜ್ ಎಂಬ ಹೆಸರಿನ ಐಡಿ ಸಿಕ್ಕಿದೆ. ನಾನೇ ಪ್ರೇಮರಾಜ್ ಎಂಬಾತನ ಜೊತೆ ಮಾತನಾಡಿದ್ದೇನೆ. ತಕ್ಷಣ ಪೊಲೀಸರಿಗೆ ತಿಳಿಸಲು ಪ್ರೇಮರಾಜ್ಗೆ ಹೇಳಿದ್ದೆ. ಶಾರೀಕ್ ಸಂಬಂಧಿಕರು ಬಂದು ಗುರುತು ಪತ್ತೆ ಹಚ್ಚಿದ್ದಾರೆ. ಈತ ಮೋಹನ್ ಕುಮಾರ್ ಎಂಬುವರ ಮನೆಯಲ್ಲಿ ವಾಸವಿದ್ದ. ಶಂಕಿತ ವಾಸವಿದ್ದ ಮನೆಯಲ್ಲಿ ಹಲವು ಸ್ಫೋಟಕ ವಸ್ತುಗಳು ಸಿಕ್ಕಿವೆ. ಈ ಆರೋಪಿಯು ಮೈಸೂರಿನಿಂದ ಮಂಗಳೂರಿಗೆ ಬಂದಿದ್ದಾನೆ. ಮತ್ತೊಂದು ನಕಲಿ ಗುರುತಿನ ಚೀಟಿ ಪಡೆದು ಕೊಯಮತ್ತೂರಲ್ಲೂ ವಾಸವಿದ್ದ.
ಈತಿಗೆ ಆರ್ಥಿಕ ನೆರವು ನೀಡುತ್ತಿದ್ದವರ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ. ಆರೋಪಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಶಾರೀಕ್ ಆಗಸ್ಟ್ 15,2022 ರ ಶಿವಮೊಗ್ಗ ಗಲಾಟೆ ಬಳಿಕ ಎಚ್ಚೆತ್ತುಕೊಂಡಿದ್ದ. ಅಗಸ್ಟ್ 23ರ ಬಳಿಕ ಅಲ್ಲಿಂದ ಪರಾರಿಯಾಗಿದ್ದ.
ಕೊಯಮತ್ತೂರು, ತಮಿಳುನಾಡು, ಕೇರಳ ಎಲ್ಲೆಡೆ ಸುತ್ತಾಡಿ ಮೈಸೂರಿಗೆ ಬಂದಿದ್ದ. ಅಲ್ಲಿ ರೂಂ ಮಾಡಿ ಮೊಬೈಲ್ ತಯಾರಿ ಇನ್ಸ್ಟಿಟ್ಯೂಟ್ ನಲ್ಲಿ ಕೆಲಸ ಮಾಡುತ್ತಿದ್ದ. ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತ ಗೊತ್ತಾಗಿತ್ತು. ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆಂದು ತಿಳಿಸಿದ್ದಾರೆ.
2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿದೆ. ಎ1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಗಿತ್ತು. ಮುನೀರ್ ಬಂಧನ ಬಳಿಕ ಶಾಕೀರ ಟ್ರಾಯಲ್ ಬ್ಲಾಸ್ಟ್ ಮಾಡಿದ್ದು ಗೊತ್ತಾಗಿದೆ. ಆದರೆ, ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕ ಮೋಹನ್ ಗೆ ಗೊತ್ತಿಲ್ಲ. ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರು ಬಂದಿದ್ದಾನೆ.
ಅಲ್ಲಿ ನಾಗುರಿ ಇಳಿದು ಅವನ ಟಾರ್ಗೆಟ್ ಜಾಗಕ್ಕೆ ಹೋಗುತ್ತಿದ್ದ. ಆದರೆ, ಅವನು ಎಲ್ಲಿಗೆ ಹೋಗುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿಲ್ಲ. ಆರೋಪಿ ಅವನು ಗುಣಮುಖವಾದ ಬಳಿಕ ಈ ವಿಚಾರ ತಿಳಿದುಬರಲಿದೆ. ವಾರದ ಹಿಂದೆ ಒಮ್ಮೆ ಮಂಗಳೂರಿಗೆ ಬಂದು ಸುತ್ತಾಡಿ ಹೋಗಿದ್ದಾನೆ. ಮೈಸೂರಿನಿಂದ ಇಬ್ಬರು ಹಾಗೂ ಮಂಗಳೂರಿನ ಒಬ್ಬರನ್ನ ಪ್ರಕರಣ ಸಂಬಂಧ ವಶಕ್ಕೆ ಪಡೆಯಲಾಗಿದೆ. ಇವನು ವಿದೇಶದ ಒಂದು ಉಗ್ರ ಸಂಘಟನೆಯ ಪ್ರಭಾವಕ್ಕೆ ಒಳಗಾಗಿದ್ದ ಎಂಬುವುದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.
ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹಾ ಇದರ ಮೈನ್ ಹ್ಯಾಂಡ್ಲರ್ ಆಗಿದ್ದಾನೆ. ಅವನು ತಲೆಮರೆಸಿಕೊಂಡಿದ್ದು, ಎನ್ಐಎ ಎರಡು ಲಕ್ಷ ರಿವಾರ್ಡ್ ಘೋಷಣೆ ಮಾಡಿದೆ. ಈಗ ಒಂದು ದೊಡ್ಡ ಅನಾಹುತ ತಪ್ಪಿದೆ ಅನ್ನೋ ನೆಮ್ಮದಿ ಇದೆ.
ಬಾಂಬ್ ಬ್ಲಾಸ್ಟ್ ಆಗಿದ್ದರೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗ್ತಾ ಇತ್ತು. ಆದರೆ, ಆ ವಿಚಾರದಲ್ಲಿ ದೇವರಿಗೆ ಧನ್ಯವಾದ ಸಲ್ಲಿಸಲೇಬೇಕು. ಸದ್ಯ ಅವನಿಗೆ ಚಿಕಿತ್ಸೆ ಮುಂದುವರೆದಿದೆ, ಅವನು ಗುಣಮುಖನಾದ ಬಳಿಕ ವಿಚಾರಣೆ ನಡೆಸುತ್ತೇವೆ. ಚಾಲಕ ಪುರುಷೋತ್ತಮ್ ಪೂಜಾರಿಗೆ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಅವರ ಸಂಬಂಧಿಕರ ಸಮಸ್ಯೆಗೂ ನಾವು ಸ್ಪಂದನೆ ಕೊಡುತ್ತೇವೆ. ಮಂಗಳೂರು ಮತ್ತು ಮೈಸೂರು ಪೊಲೀಸ್ ಆಯುಕ್ತರ ತನಿಖೆ ಮುಂದುವರೆಯುತ್ತಿದೆ ಎಂದು ಹೇಳಿದ್ದಾರೆ.
ಅಂತರಾಷ್ಟ್ರೀಯ ಉಗ್ರ ಸಂಘಟನೆಗಳ ಜೊತೆ ಸಂಪರ್ಕ: ಫೋಟೋ ಬಿಡುಗಡೆ
ಈ ನಡುವೆ ಶಾರೀಕ್ ಅಂತರಾಷ್ಟ್ರೀಯ ಉಗ್ರ ಸಂಘಟನೆ ಗಳೊಂದಿಗೆ ನಂಟು ಹೊಂದಿರುವುದು ಕೂಡಾ ಬಯಲಾಗಿದೆ.