ಬೆಂಗಳೂರು: ಗಡಿನಾಡ ಸಹಿತ್ಯ ಸಾಂಸ್ಕøತಿಕ ಅಕಾಡಮಿ ವತಿಯಿಂದ ನ. 20ರಂದು ದುಬೈಯಲ್ಲಿ ನಡೆಯಲಿರುವ ಐತಿಹಾಸಿಕ 'ದುಬೈ ಗಡಿನಾಡ ಉತ್ಸವ'ದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಮಂತ್ರಣಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಗಡಿನಾಡು ಕಾಸರಗೋಡಿನ ಕನ್ನಡಿಗರು ಜೊತೆಯಾಗಿ ಅಲ್ಲಿನ ಸಾಹಿತ್ಯಿಕ-ಸಾಂಸ್ಕøತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗೊಂಡಿರುವ ದುಬೈ ಗಡಿನಾಡ ಉತ್ಸವ ಯಶಸ್ವಿಯಾಗಲಿ ಎಂದು ಹಾರೈಸಿದರು.
ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಯುಎಇ ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಹಕಾರದೊಂದಿಗೆ ಕಾರ್ಯಕ್ರಮ ಜರುಗಲಿದೆ.ದುಬೈ ಗಡಿನಾಡ ಉತ್ಸವ ಸಮಿತಿ ಪದಾಧಿಕಾರಿಗಳಾದ ಜೆಡ್.ಎ ಕಯ್ಯಾರ್, ಎ.ಆರ್. ಸಉಬ್ಬಯ್ಯಕಟ್ಟೆ, ಕರ್ನಾಟಕ ಜಾನಪದ ಪರಿಷತ್ ದ.ಕ ಜಿಲ್ಲಾ ಘಟಕ ಅಧ್ಯಕ್ಷ ಪಮ್ಮಿ ಕೊಡಿಯಾಲ್‍ಬೈಲ್, ಉದ್ಯಮಿ ಗೋಪಾಲ ಶೆಟ್ಟಿ ಅರಿಬೈಲು ಉಪಸ್ಥಿತರಿದ್ದರು.
ದುಬೈ ಗಡಿನಾಡ ಉತ್ಸವ: ಆಮಂತ್ರಣಪತ್ರಿಕೆ ಬಿಡುಗಡೆ
0
ನವೆಂಬರ್ 05, 2022