ನವದೆಹಲಿ :ಚಂಡಿಗಢ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಿ ನಾಗರಿಕ ವಿಮಾನ ಯಾನ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಗೌರವಾರ್ಥ ಚಂಡಿಗಢ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 25ರಂದು ಘೋಷಿಸಿದ್ದರು.
ಭಗತ್ ಸಿಂಗ್ ಅವರು 115ನೇ ಜನ್ಮ ದಿನವನ್ನು ಸೆಪ್ಟಂಬರ್ 28ರಂದು ಆಚರಿಸಲಾಯಿತು. ಅದೇ ದೀನ ಚಂಡಿಗಢ ವಿಮಾನ ನಿಲ್ದಾಣಕ್ಕೆ ಭಗತ್ ಸಿಂಗ್ ಹೆಸರು ಇರಿಸಲಾಗುವುದು ಎಂದು ಘೋಷಿಸಲಾಗಿತ್ತು.
ಚಂಡಿಗಢದಲ್ಲಿರುವ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರು ನಾಮಕರಣ ಮಾಡಲಾಗಿದೆ ಎಂದು ನಾಗರಿಕ ವಿಮಾನ ಯಾನದ ಸಚಿವಾಲಯದ ನವೆಂಬರ್ 2ರ ಅಧಿಸೂಚನೆ ಹೇಳಿದೆ.