ಶ್ರೀನಗರ: ಕಾಶ್ಮೀರದಲ್ಲಿ ಚಳಿಯ ವಾತಾವರಣ ಹೆಚ್ಚುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ರಾತ್ರಿ ತಾಪಮಾನವು ಶೂನ್ಯಕ್ಕಿಂತಲೂ ಕಡಿಮೆಯಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
'ದಕ್ಷಿಣ ಕಾಶ್ಮೀರದ ಕೋಕರನಾಗ್ ಹೊರತುಪಡಿಸಿ ಇತರೆಡೆಗಳಲ್ಲಿ ಮಂಗಳವಾರ ರಾತ್ರಿ ತಾಪಮಾನವು ಶೂನ್ಯಕ್ಕಿಂತ ಕಡಿಮೆಯಿದೆ' ಎಂದೂ ಅಧಿಕಾರಿಗಳು ಹೇಳಿದ್ದಾರೆ.