ಬರೇಲಿ : ದ್ವೇಷ ಭಾಷಣ ಪ್ರಕರಣ ಸಂಬಂಧ ತಮಗೆ ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ರಾಂಪುರ ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ.
ದ್ವೇಷ ಭಾಷಣದ ಆರೋಪ ಸಾಬೀತಾಗಿದ್ದರಿಂದ ರಾಂಪುರದ ಜನಪ್ರತಿನಿಧಿಗಳ ನ್ಯಾಯಾಲಯವು ಅಜಂ ಖಾನ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.