ಬೆಂಗಳೂರು: 'ಪ್ರಗತಿಯ ಪ್ರತಿಮೆ' ಎಂಬ ಹೆಸರಿನಲ್ಲಿ ಸ್ಥಾಪಿತಗೊಂಡಿರುವ, ರಾಜಧಾನಿ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ಗೆ ಪಾತ್ರವಾಗಿದೆ.
ಪಟ್ಟಣವನ್ನು ನಿರ್ಮಿಸಿದವರ ಹೆಸರಿನಲ್ಲಿ ಸ್ಥಾಪನೆಗೊಂಡಿರುವ ಪ್ರಥಮ ಹಾಗೂ ಅತಿ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ ಎಂದು ಲಂಡನ್ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಈ ಪ್ರಗತಿಯ ಪ್ರತಿಮೆಯನ್ನು ಪರಿಗಣಿಸಿದೆ.ಈ ಪ್ರತಿಮೆಯು 108 ಅಡಿ ಎತ್ತರವಿದ್ದು, 4 ಟನ್ ತೂಕದ ಖಡ್ಗವನ್ನೂ ಹೊಂದಿದೆ.
'ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ 'ಪ್ರಗತಿಯ ಪ್ರತಿಮೆ' ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ' ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂತಸವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ಈ ಪ್ರಗತಿಯ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.