HEALTH TIPS

ಮಂಗಲ್ಪಾಡಿ ಕಸದ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಮಧ್ಯಪ್ರವೇಶ: ತುರ್ತು ಮಾಸ್ಟರ್ ಪ್ಲಾನ್ ತಯಾರಿಸಲು ಸೂಚನೆ


       ಕಾಸರಗೋಡು: ಮಂಗಲ್ಪಾಡಿ ಗ್ರಾಮ ಪಂಚಾಯಿತಿಯಲ್ಲಿನ ಕಸದ ಸಮಸ್ಯೆಯನ್ನು ಪರಿಹರಿಸಲು ರಾಜ್ಯ ಸರ್ಕಾರವು ಮಧ್ಯಪ್ರವೇಶಿಸಿದೆ.  ಸಭೆಯಲ್ಲಿ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾರದ ಮುರಳೀಧರನ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಸದ ಸಮಸ್ಯೆ ಬಗೆಹರಿಸಲು ಪಂಚಾಯಿತಿ ಆಡಳಿತ ತುರ್ತಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ನೈರ್ಮಲ್ಯ ಮಿಷನ್, ಹಸಿರು  ಕೇರಳ ಮಿಷನ್ ಮತ್ತು ಸ್ಥಳೀಯಾಡಳಿತ  ಜಂಟಿ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಮಾಸ್ಟರ್ ಪ್ಲಾನ್ ತಯಾರಿಸಬೇಕು. ಅಲ್ಲದೇ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಹಾಗೂ ಆರೋಗ್ಯಕ್ಕೆ ಹಾನಿಯುಂಟು ಮಾಡುವ ತ್ಯಾಜ್ಯ ಸಮಸ್ಯೆ ಬಗೆಹರಿಸಲು ಪಂಚಾಯಿತಿ ಕೂಡಲೇ ಮುಂದಾಗಬೇಕು ಎಂದು ಸಲಹೆ ನೀಡಲಾಗಿದೆ. ಮಂಗಲ್ಪಾಡಿ ಪಂಚಾಯಿತಿ ವ್ಯಾಪ್ತಿಯ ಕುಬಣೂರಿನಲ್ಲಿ ಸ್ವಚ್ಛತಾ ಮಿಷನ್ ಸ್ಥಾಪಿಸಿರುವ ಸ್ವಚ್ಛತಾ ಮಿಷನ್ ಮಾಲಿನ್ಯ ಸಂಗ್ರಹಣಾ ಸೌಲಭ್ಯ (ಎಂಸಿಎಫ್) ಘಟಕದಲ್ಲಿ ಕಸದ ರಾಶಿ ಬಿದ್ದಿದೆ. ತ್ಯಾಜ್ಯ ವಿಲೇವಾರಿಗೆ ಮೀಸಲಿಟ್ಟ ಹಣವನ್ನು ಬಳಸಿಕೊಂಡು ಸ್ವಚ್ಛ ಕೇರಳ ಕಂಪನಿ ಸಹಯೋಗದಲ್ಲಿ ತ್ಯಾಜ್ಯ ತೆಗೆಯಲು ಪಂಚಾಯಿತಿ ತುರ್ತಾಗಿ ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.
          ಪಂಚಾಯಿತಿಯಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣಾ ಚಟುವಟಿಕೆಗಳಿಗೆ ಮೀಸಲಿಟ್ಟಿರುವ ನಿಧಿಯ ಚಟುವಟಿಕೆಗಳನ್ನು ಮೌಲ್ಯಮಾಪನ ಮತ್ತು ಸಮನ್ವಯಗೊಳಿಸಲು ಸಭೆಯಲ್ಲಿ ಪ್ರಸ್ತಾವನೆಯನ್ನು ನೀಡಲಾಯಿತು. ಸ್ವಚ್ಛತಾ ಮಿಷನ್ ಕಾರ್ಯನಿರ್ವಾಹಕ ನಿರ್ದೇಶಕ ಕೆ.ಟಿ.ಬಾಲಭಾಸ್ಕರನ್, ಪಂಚಾಯತ್ ಜಂಟಿ ನಿರ್ದೇಶಕ ಜೇಸನ್ ಮ್ಯಾಥ್ಯೂ, ನವಕೇರಳ ಮಿಷನ್ ಜಿಲ್ಲಾ ಸಂಯೋಜಕ ಕೆ.ಬಾಲಕೃಷ್ಣನ್, ನೈರ್ಮಲ್ಯ ಮಿಷನ್ ಜಿಲ್ಲಾ ಸಂಯೋಜಕಿ ಎ.ಲಕ್ಷ್ಮಿ, ಮಂಗಲ್ಪಾಡಿ ಪಂಚಾಯಿತಿ ಅಧ್ಯಕ್ಷೆ ಖದೀಜತ್ ರಿಸಾನ, ಉಪಾಧ್ಯಕ್ಷ ಯೂಸುಫ್, ಪಂಚಾಯಿತಿ ಸದಸ್ಯ ಎಂ.ವಿಜಯಕುಮಾರ್ ರೈ, ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಟಿ.ಪಿ. ದೀಪೇಶ್ ಮತ್ತಿತರರು ಭಾಗವಹಿಸಿದ್ದರು.
                ಮಂಗಲ್ಪಾಡಿಯ ಕಸದ ಸಮಸ್ಯೆ
         ಮಂಗಲ್ಪಾಡಿ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಹಾಗೂ ಕುಬಣೂರಿನ ಸ್ಥಾವರದಲ್ಲಿ ಕಸದ ರಾಶಿ ಬಿದ್ದಿದೆ. ಗಂಭೀರ ಆರೋಗ್ಯ ಮತ್ತು ಪರಿಸರ ಸಮಸ್ಯೆಗಳನ್ನು ಉಂಟುಮಾಡುತ್ತಿರುವ ತ್ಯಾಜ್ಯ ಸಮಸ್ಯೆಯನ್ನು ಪರಿಹರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಮಂಗಲ್ಪಾಡಿ ಪಂಚಾಯಿತಿಯು ರಸ್ತೆ ಬದಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವಿಂಗಡಣೆ ಮಾಡದೆ ಕಸವನ್ನು ಎಸೆಯುವುದು, ಎಸೆದ ಕಸವನ್ನು ಸರಿಯಾಗಿ ಸಂಗ್ರಹಿಸಿ ವಿಲೇವಾರಿ ಮಾಡದಿರುವುದು ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೀಗಿರುವಾಗ 2021-22ನೇ ಸಾಲಿಗೆ ಪಂಚಾಯತ್ ಮಟ್ಟದಲ್ಲಿ ಜಿಲ್ಲಾ ನೈರ್ಮಲ್ಯ ಮಿಷನ್ ನೇತೃತ್ವದಲ್ಲಿ ಸ್ವಚ್ಛ ಮಂಗಲ್ಪಾಡಿ ಹಸಿರು ಮಂಗಲ್ಪಾಡಿ ಎಂಬ ಹೆಸರಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಆರಂಭಿಸಲಾಗಿದೆ. ಫೆಬ್ರವರಿಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಫ್ಲಾಟ್ ಸಮುಚ್ಚಯಗಳಿಗೆ ಭೇಟಿ ನೀಡಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಇಲ್ಲದ ಫ್ಲ್ಯಾಟ್ ಗಳಿಗೆ ನೋಟಿಸ್ ನೀಡಲಾಗಿತ್ತು. ಆ.4ರಂದು ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಸದ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಿಯಾ ಯೋಜನೆ ರೂಪಿಸಿ ಡ್ರೈಡೇ ಆಚರಿಸುವಂತೆ ಪಂಚಾಯಿತಿ ಕಾರ್ಯದರ್ಶಿಗೆ ಸೂಚಿಸಲಾಯಿತು. ಇದೇ ತಿಂಗಳ 30 ರಂದು ಜಿಲ್ಲಾ ಯೋಜನಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಂಗಲ್ಪಾಡಿ ಪಂಚಾಯತ್ ನ ಜಾರಿ ಅಧಿಕಾರಿಗಳ ಸಭೆ ನಡೆಸಿ ತ್ಯಾಜ್ಯ ವಿಲೇವಾರಿಗೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಯಿತು. ಹಲವು ಸಭೆಗಳು, ನಿರ್ಣಯಗಳು ನಡೆದರೂ ಪಂಚಾಯಿತಿಯಲ್ಲಿ ತ್ಯಾಜ್ಯದ ಸಮಸ್ಯೆ ಹಾಗೆಯೇ ಉಳಿದಿದೆ. ಹೀಗಿರುವಾಗ ರಾಜ್ಯ ಸರ್ಕಾರ ಗಟ್ಟಿ ನಿಲುವಿಗೆ ಮುಂದಾಗಿದೆ. ತ್ಯಾಜ್ಯ ಸಮಸ್ಯೆ ನಿವಾರಣೆಗೆ ಕೂಡಲೇ ಕ್ರಮಕೈಗೊಳ್ಳುವಂತೆ ಪಂಚಾಯಿತಿಗೆ ಹಲವು ಸಲಹೆಗಳನ್ನು ನೀಡಲಾಯಿತು. ಸಮಸ್ಯೆ ಬಗೆಹರಿಯದಿದ್ದಾಗ ರಾಜ್ಯ ಸರ್ಕಾರ ನೇರವಾಗಿ ಮಧ್ಯಪ್ರವೇಶಿಸಿ ಸಭೆ ನಡೆಸಿತು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries