HEALTH TIPS

ಗುಜರಾತ್ ತೂಗುಸೇತುವೆ ದುರಂತಕ್ಕೆ ಮರುಗಿದ ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ

 

                ವಿಶ್ವಸಂಸ್ಥೆ: ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಸಂಭವಿಸಿದ ತೂಗುಸೇತುವೆ ದುರಂತದ ಬಗ್ಗೆ ಮರುಕ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಯಂಟೊನಿಯೊ ಗುಟೆರಸ್‌ ಅವರು, ಮೃತರ ಕುಟುಂಬದವರಿಗೆ ಸಂತಾಪ ಸೂಚಿಸಿದ್ದಾರೆ.

'ಗುಜರಾತ್‌ನಲ್ಲಿ ಸಂಭವಿಸಿದ ಮೊರ್ಬಿ ತೂಗುಸೇತುವೆ ದುರಂತದ ಸುದ್ದಿ ಕೇಳಿ ಮಹಾ ಪ್ರಧಾನ ಕಾರ್ಯದರ್ಶಿ ಅವರು ತೀವ್ರ ದುಃಖಿತರಾಗಿದ್ದಾರೆ' ಎಂದು ಗುಟೆರಸ್‌ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಸೋಮವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

              ಸಂತ್ರಸ್ತರ ಕುಟುಂಬದವರಿಗೆ ಗುಟೆರಸ್‌ ಅವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ.

              ಪಶ್ಚಿಮ ಗುಜರಾತ್‌ನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಶತಮಾನದಷ್ಟು ಹಳೆಯ ತೂಗುಸೇತುವೆ ಭಾನುವಾರ ಸಂಜೆ ಮುರಿದು ಬಿದ್ದಿತ್ತು. ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವವರ ಶೋಧಕಾರ್ಯ ಮುಂದುವರಿದಿದೆ.

                   ಈ ಸಂಬಂಧ ಮೊರ್ಬಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ರಾಜ್ಯ ಸರ್ಕಾರವೂ ತನಿಖಾ ತಂಡವನ್ನು ರಚಿಸಿದೆ.

                 ಈವರೆಗೆ ಒಟ್ಟು 136 ಶವಗಳನ್ನು ನದಿಯಿಂದ ಹೊರತೆಗೆಯಲಾಗಿದೆ. ಮೃತರಲ್ಲಿ 50 ಮಕ್ಕಳು ಮತ್ತು 40 ಮಹಿಳೆಯರು ಸೇರಿದ್ದಾರೆ. ಒಟ್ಟು 170 ಜನರನ್ನು ರಕ್ಷಿಸಲಾಗಿದೆ. ಅವರಿಗೆ ಮೊರ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚೇತರಿಸಿಕೊಂಡ ಹಲವರು ಮನೆಗೆ ಮರಳಿದ್ದಾರೆ. ಅವಘಡದಲ್ಲಿ ಇನ್ನೂ ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೊರ್ಬಿ ಜಿಲ್ಲಾಡಳಿತ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries