ಭೋಪಾಲ್: ಮಧ್ಯಪ್ರದೇಶದ ಮಂಡ್ಲಾ ಮತ್ತು ಬಾಲಘಾಟ್ ಜಿಲ್ಲೆಗಳಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿದ್ದಾರೆ.
ಭೋಪಾಲ್‌ನಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ಬಾಲಘಾಟ್ ಜಿಲ್ಲೆ ವ್ಯಾಪ್ತಿಯಲ್ಲಿ ಎನ್‌ಕೌಂಟರ್ ನಡೆದಿದೆ ಎಂದು ವರದಿಯಾಗಿದೆ.
ಮಂಡ್ಲಾ ಮತ್ತು ಬಾಲಘಾಟ್ ಜಿಲ್ಲೆಯ ಭದ್ರತಾ ಪಡೆಗಳು ಮತ್ತು ಪೊಲೀಸರು ಬುಧವಾರ ನಕ್ಸಲರ ವಿರುದ್ಧ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಬಾಲಘಾಟ್ ಜಿಲ್ಲೆಯ ಗರ್ಹಿ ಪ್ರದೇಶ ಮತ್ತು ಮಂಡ್ಲಾ ಜಿಲ್ಲೆಯ ಮೋತಿನಾಳದ ಸುಪ್ಖಾರ್ ಪ್ರದೇಶದಲ್ಲಿ ಎನ್‌ಕೌಂಟರ್ ನಡೆಸಲಾಗಿದೆ ಎಂದು ಮಂಡ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ), ಗಜೇಂದ್ರ ಸಿಂಗ್ ತಿಳಿಸಿದ್ದಾರೆ.
'ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ' ಎಂದು ಗಜೇಂದ್ರ ಸಿಂಗ್ ಹೇಳಿದ್ದಾರೆ.
ಮೃತ ನಕ್ಸಲರು ಕನ್ಹಾ ಭೋರಮ್‌ದೇವ್ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಅವರ ಚಲನವಲನಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಲಾಗಿತ್ತು ಪೊಲೀಸರು ತಿಳಿಸಿದ್ದಾರೆ.