ತಿರುವನಂತಪುರ: ಶಿಕ್ಷಣ ಕ್ಷೇತ್ರಕ್ಕೆ ರಾಜ್ಯಪಾಲರು ಬಿಕ್ಕಟ್ಟು ಸೃಷ್ಟಿಸುತ್ತಿದ್ದಾರೆ ಎಂದು ಸಚಿವ ವಿ.ಶಿವಂಕುಟ್ಟಿ ಹೇಳಿದ್ದಾರೆ.
ರಾಜ್ಯಪಾಲರು ರಾಜ್ಯದ ಅಭಿವೃದ್ಧಿಗೆ ಅಡ್ಡಿ ಮಾಡುತ್ತಿದ್ದಾರೆ. ಕುಲಪತಿ ಬದಲಾವಣೆ ವಿಚಾರದಲ್ಲಿ ಸಾಂವಿಧಾನಿಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಿವಂಕುಟ್ಟಿ ಹೇಳಿದ್ದಾರೆ. ಈ ನಿಟ್ಟಿನಲ್ಲಿ ವಿಶೇಷ ಸಭೆ ಕರೆಯುವ ಚಿಂತನೆ ಇಲ್ಲ ಎಂದಿರುವರು.
ನಿನ್ನೆ ನಡೆದ ಸಚಿವ ಸಂಪುಟ ಸಭೆಯು ರಾಜ್ಯಪಾಲರನ್ನು ಕುಲಪತಿ ಸ್ಥಾನದಿಂದ ಕೆಳಗಿಳಿಸುವ ಮಸೂದೆಗೆ ಅನುಮೋದನೆ ನೀಡಿತ್ತು. ಇದಾದ ಬಳಿಕ ಸುಗ್ರೀವಾಜ್ಞೆಯನ್ನು ರಾಜ್ಯಪಾಲರಿಗೆ ಕಳುಹಿಸಲಾಯಿತು.
ರಾಜ್ಯಪಾಲರು ವಿವಾದಗಳಿಗೆ ದಾರಿ ಮಾಡಿಕೊಡುತ್ತಿದ್ದಾರೆ ಎಂದು ಶಿವಂಕುಟ್ಟಿ ಆರೋಪಿಸಿದ್ದಾರೆ. ರಾಜ್ಯಪಾಲರು ಪ್ರತಿಪಕ್ಷಗಳಿಗಿಂತ ಹೆಚ್ಚು ಬಲವಾಗಿ ಸರ್ಕಾರವನ್ನು ವಿರೋಧಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.
ರಾಜ್ಯಪಾಲರು ಮುಖ್ಯಮಂತ್ರಿಯನ್ನು ಬಳಸಬಾರದ ಭಾμÉಯಲ್ಲಿ ಟೀಕಿಸುತ್ತಾರೆ. ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ಕೆಳಗಿಳಿಸಿ ಶಿಕ್ಷಣ ಕ್ಷೇತ್ರದ ಪರಿಣಿತರನ್ನು ಕುಲಪತಿಗಳಾಗಿ ನೇಮಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸಚಿವ ಸಂಪುಟ ಅಂಗೀಕರಿಸಿರುವ ಮಸೂದೆ ಯಾರ ವಿರುದ್ಧವೂ ಅಲ್ಲ ಎಂದು ಸಚಿವೆ ಆರ್.ಬಿಂದು ಹೇಳಿದ್ದಾರೆ. ಮಸೂದೆಯಲ್ಲಿ ಯಾವುದೇ ಗೊಂದಲವಿಲ್ಲ. ರಾಜಭವನಕ್ಕೆ ಕಳುಹಿಸಿದ ಸುಗ್ರೀವಾಜ್ಞೆಗೆ ಸಹಿ ಹಾಕುವುದು ಶಿμÁ್ಟಚಾರ. ಪ್ರಜಾಸತ್ತಾತ್ಮಕ ವಿಧಾನದ ಪ್ರಕಾರ ರಾಜ್ಯಪಾಲರು ಸಹಿ ಹಾಕಬೇಕು ಎಂದೂ ಸಚಿವೆ ಸ್ಪಷ್ಟಪಡಿಸಿದ್ದಾರೆ.
ರಾಜ್ಯಪಾಲರು ಬಿಕ್ಕಟ್ಟು ಸೃಷ್ಟಿಸುತ್ತಿದ್ದಾರೆ: ವಿ.ಶಿವಂಕುಟ್ಟಿ: ಸುಗ್ರೀವಾಜ್ಞೆಗೆ ಸಹಿ ಹಾಕುವುದು ಸಭ್ಯತನ: ಆರ್.ಬಿಂದು
0
ನವೆಂಬರ್ 12, 2022