ಪಾಲಕ್ಕಾಡ್: ಆರೆಸ್ಸೆಸ್ ಮುಖಂಡ ಶ್ರೀವಿನಾಸ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಡಿವೈಎಸ್ಪಿಗೆ ನಿಷೇಧಿತ ಧಾರ್ಮಿಕ ಭಯೋತ್ಪಾದಕ ಸಂಘಟನೆ ಪಾಪ್ಯುಲರ್ ಫ್ರಂಟ್ ಜೀವ ಬೆದರಿಕೆ ಹಾಕಿದೆ.
ನಾರ್ಕೋಟಿಕ್ಸ್ ಡಿವೈಎಸ್ಪಿ ಅನಿಲ್ ಕುಮಾರ್ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಶವಪೆಟ್ಟಿಗೆಯನ್ನು ಸಿದ್ಧಪಡಿಸುವಂತೆ ಬೆದರಿಕೆ ಹಾಕಲಾಗಿದೆ. ಘಟನೆ ಕುರಿತು ಪೋಲೀಸರು ತನಿಖೆ ಆರಂಭಿಸಿದ್ದಾರೆ.
ಪಿ.ಎಫ್.ಐ ಕಾರ್ಯಕರ್ತರು ಡಿವೈಎಸ್ಪಿಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ. ನಿನ್ನೆ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಆರೋಪಿಗಳಾದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಇದು ಪಿ.ಎಫ್.ಐ ಕಾರ್ಯಕರ್ತರನ್ನು ಕೆರಳಿಸಿದೆ.
ಇದೇ ವೇಳೆ ಶ್ರೀನಿವಾಸನ್ ಹತ್ಯೆ ಪ್ರಕರಣದ ಮತ್ತಿಬ್ಬರು ಆರೋಪಿಗಳನ್ನು ತನಿಖಾ ತಂಡ ಬಂಧಿಸಿದೆ. ತ್ರಿತಾಲ ಮೂಲದ ಅನ್ಸಾರ್ ಮತ್ತು ಪಟ್ಟಾಂಬಿ ಮೂಲದ ಅಶ್ರಫ್ ಬಂಧಿತ ಆರೋಪಿಗಳು. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಘಟನೆ ಬಳಿಕ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗಿದೆ. ಭಾನುವಾರ ಎಸ್‍ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮೀರ್ ಅಲಿ ಯನ್ನೂ ಬಂಧಿಸಲಾಗಿತ್ತು.
'ಶವಪೆಟ್ಟಿಗೆಯನ್ನು ಸಿದ್ಧಪಡಿಸಿಡಿ'; ಶ್ರೀನಿವಾಸ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಡಿವೈಎಸ್ಪಿಗೆ ಪಾಪ್ಯುಲರ್ ಫ್ರಂಟ್ ನಿಂದ ಜೀವ ಬೆದರಿಕೆ
0
ನವೆಂಬರ್ 07, 2022