ಮೋರ್ಬಿ: ಈಗಾಗಲೇ ಮೋರ್ಬಿ ಸೇತುವೆ 130ಕ್ಕೂ ಹೆಚ್ಚಿನ ಜನರನ್ನು ಬಲಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮಚ್ಚು ನದಿಗೆ ಕುಸಿದು ಬಿದ್ದ ಸೇತುವೆಯ ಬಳಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ಇನ್ನೂ ಕೊನೆಯಾಗಿಲ್ಲ.
ನಿನ್ನೆ (ಅ.31) ಏಕ್ತಾನಗರದಲ್ಲಿದ್ದ ಪ್ರಧಾನಿ 'ಘಟನಾ ಸ್ಥಳಕ್ಕೆ ಭೇಟಿ ನೀಡುತ್ತೇನೆ' ಎಂದಿದ್ದರು. ಅದರಂತೆ ಇಂದು ಮೋದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಗಾಂಧಿನಗರದ ರಾಜಭವನದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಮೋದಿಗೆ ಘಟನೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ನೆರವನ್ನು ನೀಡಲು ಪ್ರಧಾನಿ ಸೂಚಿಸಿದ್ದಾರೆ.
ಸೇತುವೆ ಕುಸಿದ ಘಟನೆಯ ತನಿಖೆಗಾಗಿ ಗುಜರಾತ್ ಸರ್ಕಾರ ಐವರು ಸದಸ್ಯರ ಸಮಿತಿಯನ್ನು ರಚಿಸಿದೆ. ಮೋರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ, ಸೇತುವೆಯನ್ನು ನವೀಕರಿಸಿದ 'ಒರೆವಾ' ಕಂಪನಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ.