ಇಡುಕ್ಕಿ: ಇಡುಕ್ಕಿ ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಮುಂದುವರಿದಿದ್ದು, ಮುನ್ನಾರ್ ಕುಂಡಲಕ್ ಬಳಿಯ ಪುದುಕಾಡಿ ಮತ್ತು ಎಲ್ಲಪೆಟ್ಟಿಯಲ್ಲಿ ಭೂಕುಸಿತ ಸಂಭವಿಸಿದೆ.ಪುದುಕಾಡಿಯಲ್ಲಿ ವಡಕರದಿಂದ ತೆರಳುತ್ತಿದ್ದ ಪ್ರಯಾಣಿಕರ ವಾಹನದ ಮೇಲೆ ಮಣ್ಣು ಬಿದ್ದಿದ್ದು, ಓರ್ವ ವ್ಯಕ್ತಿ ಮೃತನಾಗಿರುವ ಶಂಕೆ ವ್ಯಕ್ತವಾಗಿದೆÉ. ಈ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.
ಕುಂಡಾಲ ಅಣೆಕಟ್ಟಿನ ಬಳಿ ಭೂಕುಸಿತ ಉಂಟಾಗಿ ಮುನ್ನಾರ್ ವಟ್ಟವಾಡ ರಸ್ತೆಯನ್ನು ಬಂದ್ ಮಾಡಲಾಗಿದೆ.ಈ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.ಪ್ರವಾಸಿಗರು ಮತ್ತು ಇತರ ಪ್ರಯಾಣಿಕರು ವಿಶೇಷ ಕಾಳಜಿ ವಹಿಸಿ ಈ ರಸ್ತೆಯಲ್ಲಿ ಪ್ರಯಾಣಿಸುವುದನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಗಾಳಿಯ ರಭಸಕ್ಕೆ ಪುಲಿಯನ್ಮಲ ಕಂಬಮ್ಮೆಟ್ ಕಂಬಂ ಅಂತಾರಾಜ್ಯ ಹೆದ್ದಾರಿಯಲ್ಲಿ ಬೃಹತ್ ಮರವೊಂದು ವಾಹನದ ಮೇಲೆ ಬಿದ್ದಿದ್ದು, ಕಾರ್ಮಿಕರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದಿದೆ.ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಭಾರೀ ಮಳೆಯಿಂದಾಗಿ ಅಂತಾರಾಜ್ಯ ಹೆದ್ದಾರಿಯಲ್ಲಿ ಒಂದೂವರೆ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ. ನೂರಾರು ವಾಹನಗಳು ಸಿಲುಕಿಕೊಂಡಿವೆ.
ಇಡುಕ್ಕಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಇಡುಕ್ಕಿ ಜಿಲ್ಲೆಯಲ್ಲಿ ನಿನ್ನೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದೂ ಮಳೆ ಮುಂದುವರಿಯಲಿದೆ.
ಮುನ್ನಾರ್‍ನಲ್ಲಿ ಭೂಕುಸಿತ: ಸಿಲುಕಿದ ಪ್ರವಾಸಿಗರ ವಾಹನ: ಪ್ರಯಾಣ ನಿಷೇಧ ಹೇರಿದ ಜಿಲ್ಲಾಧಿಕಾರಿ
0
ನವೆಂಬರ್ 12, 2022