ನವದೆಹಲಿ: ಕೇಂದ್ರ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ರಾಜ್ಯಸಭಾ ನೀತಿ ಸಮಿತಿ ಮುಖ್ಯಸ್ಥರಾಗಿ ಮತ್ತು ಬಿಜೆಪಿ ಸಂಸದ ಸಿ.ಎಂ.ರಮೇಶ್ ಅವರನ್ನು ವಸತಿ ಸಮಿತಿಯ ಮುಖ್ಯಸ್ಥರಾಗಿ ನೇಮಿಸಲಾಗಿದೆ.
ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ಹಲವು ಸಮಿತಿಗಳನ್ನು ಪುನರ್ ರಚನೆ ಮಾಡಿ ಅವುಗಳ ಮುಖ್ಯಸ್ಥರನ್ನು ನೇಮಕ ಮಾಡಿದ್ದಾರೆ ಎಂದು ಮೇಲ್ಮನೆ ಸಚಿವಾಲಯ ಪ್ರಕಟಣೆ ಬಿಡುಗಡೆ ಮಾಡಿದೆ.