ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ Y+ ಭದ್ರತೆ ನೀಡಲು ನಿರ್ಧರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಸಲ್ಮಾನ್ ಖಾನ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಪತ್ರ ಬಂದಿತ್ತು.
ನಂತರ ಸಲ್ಮಾನ್ ಖಾನ್ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಹೆಚ್ಚಿನ ಭದ್ರತೆಯ ದೃಷ್ಟಿಯಿಂದ Y+ ಭದ್ರತೆ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ.
ಸದ್ಯ ಮುಂಬೈ ಪೊಲೀಸರು ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ್ದಾರೆ. ಕೆಲವು ತಿಂಗಳ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹಾಗೂ ಗೋಲ್ಡಿ ಬ್ರಾರ್ ತಂಡದಿಂದ ಸಲ್ಮಾನ್ ಖಾನ್ ಅವರನ್ನು ಕೊಲೆ ಮಾಡಲು ಹೊಂಚು ಹಾಕಲಾಗಿತ್ತು ಎಂದು ವರದಿಯಾಗಿತ್ತು. ಅಲ್ಲದೆ 2017ರಲ್ಲಿ ತಮ್ಮ ಬಾಂಗ್ರಾದಲ್ಲಿರುವ ನಿವಾಸದಲ್ಲಿ ಹುಟ್ಟು ಹಬ್ಬ ಆಚರಿಸುವ ವೇಳೆ ಹಾಗೂ 2018ರಲ್ಲಿ ಫಾರ್ಮ್ಹೌಸ್ನಲ್ಲಿದ್ದಾಗ ಸಲ್ಮಾನ್ ಮೇಲೆ ಕೊಲೆ ಯತ್ನ ನಡೆದಿತ್ತು.