ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‌ಇ)ಯ 10ನೇ ಮತ್ತು 12ನೇ ತರಗತಿಯ ಪರೀಕ್ಷೆಗೆ ದಿನಾಂಕ ಪ್ರಕಟವಾಗಿದೆ
ಎರಡೂ ತರಗತಿಗಳ ಪರೀಕ್ಷೆಗಳು ಫೆಬ್ರವರಿ 15ರಂದೇ ಆರಂಭವಾಗಲಿವೆ ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
10ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಆರಂಭವಾಗಿ ಮಾರ್ಚ್ 21ಕ್ಕೆ ಮುಕ್ತಾಯವಾಗಲಿವೆ. ಹಾಗೇ 12ನೇ ತರಗತಿ ಪರೀಕ್ಷೆ ಫೆಬ್ರವರಿ 15ರಂದು ಪ್ರಾರಂಭವಾಗಿ, ಏಪ್ರಿಲ್ 5ಕ್ಕೆಯಾಗಲಿವೆ.
ಉಭಯ ತರಗತಿಗಳ ಪರೀಕ್ಷೆ ಬೆಳಗ್ಗೆ 10.30ಕ್ಕೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಮುಕ್ತಾಯವಾಗಲಿವೆ.
ಇದರ ಜೊತೆಗೆ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಓದಿಕೊಳ್ಳಲು 15 ನಿಮಿಷ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.