ನವದೆಹಲಿ : ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಹಾಗೂ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂ) 11 ಸಾವಿರ ಬೋಧಕ ಹುದ್ದೆಗಳು ಖಾಲಿಯಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಲೋಕಸಭೆಗೆ ತಿಳಿಸಿದರು.
'ತ್ವರಿತ ಗತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯವು ಸ್ವಾಯತ್ತ ಸಂಸ್ಥೆಯಾಗಿದ್ದು, ನಿಯಮದ ಪ್ರಕಾರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು' ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
'ಕೇಂದ್ರೀಯ ವಿಶ್ವವಿದ್ಯಾಲಯ ಹಾಗೂ ಐಐಎಂಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ, 961 ಹುದ್ದೆಗಳು ಎಸ್‌ಸಿಗೆ, 578 ಹುದ್ದೆಗಳು ಎಸ್‌ಟಿಗೆ, 1,657 ಹುದ್ದೆಗಳು ಹಿಂದುಳಿತ ವರ್ಗಗಳಿಗೆ ಮೀಸಲು ಇರುವ ಹುದ್ದೆಗಳಾಗಿವೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ 643 ಹಾಗೂ ಅಂಗವಿಕರಿಗೆ 301 ಹುದ್ದೆಗಳು ಮೀಸಲಿವೆ' ಎಂದರು.
ಸಂಸ್ಥೆ;ಮಂಜೂರಾದ ಹುದ್ದೆ;ಖಾಲಿ ಇರುವ ಹುದ್ದೆ
ಕೇಂದ್ರೀಯ ವಿಶ್ವವಿದ್ಯಾಲಯ;18,956;6,180
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ;11,170;4,502
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್;1,566;493